ADVERTISEMENT

ಇನ್ನೆಷ್ಟು ವರ್ಷ ಬೇಕಾಗಬಹುದು?

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 20:00 IST
Last Updated 21 ಜನವರಿ 2020, 20:00 IST

ಉತ್ತರ ಕನ್ನಡ ಹಾಗೂ ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಆಗಬೇಕಾದರೆ, ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗದ ನಿರ್ಮಾಣ ಹಾಗೂ ಅಂಕೋಲಾ ತಾಲ್ಲೂಕಿನ ಬೇಲೆಕೇರಿ ಬಂದರಿನ ಅಭಿವೃದ್ಧಿ ಅತಿ ಶೀಘ್ರದಲ್ಲಿ ಆಗಬೇಕಾಗಿದೆ. ಈ ರೈಲು ಯೋಜನೆಯನ್ನು ವಿರೋಧಿಸುತ್ತಿರುವ ಕೆಲವು ಬುದ್ಧಿಜೀವಿಗಳು ಹಾಗೂ ಜನಪ್ರತಿನಿಧಿಗಳು ಈ ಭಾಗದ ಅಭಿವೃದ್ಧಿ ಬಗ್ಗೆ ಯೋಚಿಸಬೇಕಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮಂತ್ರಿಗಳು, ಅಧಿಕಾರಿಗಳು ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗ ನಿರ್ಮಾಣ ಯೋಜನೆಯ ಜಾರಿಗೆ ಇರುವ ಎಲ್ಲ ಅಡೆತಡೆಗಳನ್ನೂ ನಿವಾರಿಸಬೇಕು. ಹೆಚ್ಚಿನ ಅನುದಾನ ಮಂಜೂರು ಮಾಡಿ, ಕಾಲಮಿತಿಯೊಳಗೆ ಈ ಯೋಜನೆಯನ್ನು ಪೂರ್ಣಗೊಳಿಸಲು ಮುಂದಾಗಬೇಕು.

–ರಾಜೇಶ್ ಎಸ್. ತೋಡುರ, ಕಾರವಾರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.