ADVERTISEMENT

ಮಾರಕ ರೋಗ: ಎಚ್ಚರ ವಹಿಸಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 20:00 IST
Last Updated 5 ಜೂನ್ 2020, 20:00 IST

ಈ ವರ್ಷ ಸಕಾಲದಲ್ಲಿ ಮುಂಗಾರು ಪ್ರವೇಶಿಸಿರುವುದರಿಂದ ಎಲ್ಲರ ಮೊಗದಲ್ಲಿ ಮಂದಹಾಸ ಮೂಡಿದೆ. ಅಂತೆಯೇ ಮಳೆಯ ಜೊತೆಗೆ ಬರುವ ಡೆಂಗಿ, ಚಿಕೂನ್‌ಗುನ್ಯದಂಥ ಮಾರಕ ರೋಗಗಳು ಹರಡದಂತೆ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಆರೋಗ್ಯ ಇಲಾಖೆಯ ಬಹುತೇಕ ಅಧಿಕಾರಿಗಳು ಮತ್ತು ಸಿಬ್ಬಂದಿ ಈಗಾಗಲೇ ಕೊರೊನಾ ಸೋಂಕು ನಿಯಂತ್ರಣ ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಇದು ಅನಿವಾರ್ಯ. ಇದೇ ವೇಳೆ, ಮಳೆಗಾಲದಲ್ಲಿ ಹರಡಬಹುದಾದ ರೋಗಗಳ ನಿಯಂತ್ರಣದ ಕಡೆಗೂ ಗಮನಹರಿಸಬೇಕಾಗಿದೆ. ಇದಕ್ಕೆ ಬಾಧಕ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು.

–ಗಣೇಶ ಆರ್., ಮಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT