ADVERTISEMENT

ಯುವ ಮನಸ್ಸುಗಳನ್ನು ಪೋಷಿಸಲಿ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2020, 19:30 IST
Last Updated 29 ಡಿಸೆಂಬರ್ 2020, 19:30 IST

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟ ಹೆಚ್ಚಳಕ್ಕಾಗಿ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡಲು ಸರ್ಕಾರ ಸಿದ್ಧವಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ (ಪ್ರ.ವಾ., ಡಿ. 26). ಜನಪ್ರತಿನಿಧಿಗಳು ಯಾವುದೇ ಪಕ್ಷದವರಾಗಿರಲಿ, ಮುಂಬಾಗಿಲಿನಲ್ಲಿ ಶೈಕ್ಷಣಿಕ ಸ್ವಾಯತ್ತತೆ ಬಗ್ಗೆ ಬದ್ಧತೆ ಪ್ರದರ್ಶಿಸುತ್ತಾರೆ, ಮತ್ತೊಂದೆಡೆ, ಸ್ವತಃ ಪದೇ ಪದೇ ಹಿಂಬಾಗಿಲಿನಿಂದ ಹಸ್ತಕ್ಷೇಪ ಮಾಡುತ್ತಾರೆ. ಇದಾಗದೆ, ನಿಜವಾದ ಅರ್ಥದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ಸಿಗುವಂತೆ ಆಗಬೇಕು. ಅವು ಯುವ ಮನಸ್ಸುಗಳನ್ನು ಪೋಷಿಸುವ, ಸೃಜನಶೀಲ ಮತ್ತು ಸ್ವತಂತ್ರ ಚಿಂತನೆಯ ಸ್ಥಳಗಳಾಗಬೇಕು.

-ಪ್ರವೀಣ ನಾಗಪ್ಪ ಯಲವಿಗಿ, ಹಾವೇರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT