ADVERTISEMENT

ಇಂಗ್ಲಿಷ್‌ ಮಾಧ್ಯಮ: ಅಪಾಯಕಾರಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2018, 20:00 IST
Last Updated 13 ಡಿಸೆಂಬರ್ 2018, 20:00 IST

ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದ ಶಿಕ್ಷಣ ಆರಂಭಿಸುವ ಸರ್ಕಾರದ ಚಿಂತನೆ ನಿಜಕ್ಕೂ ಆಘಾತಕಾರಿ. ಬೆಂಗಳೂರು ಮಹಾನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ವಾಸವಾಗಿರುವ ಅನ್ಯಭಾಷಿಗರು ಒಂದುಗೂಡಿ, ಆಯಾ ಬಡಾವಣೆಯಲ್ಲಿ ಕನ್ನಡದ ಚಟುವಟಿಕೆಗಳನ್ನು ಹತ್ತಿಕ್ಕುವ, ಕನ್ನಡಪರ ವಾತಾವರಣ ನಿರ್ಮಾಣವಾಗುವುದನ್ನು ತಡೆಯುವ ಕೆಲಸಗಳಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಇಂಥ ಸಂದರ್ಭದಲ್ಲಿ ಸರ್ಕಾರವು ಶಾಲೆಗಳಲ್ಲಿ ಇಂಗ್ಲಿಷ್‌ ಅನ್ನು ಒಂದು ಭಾಷೆಯಾಗಿ ಕಲಿಸದೇ, ಮಾಧ್ಯಮವನ್ನೇ ಇಂಗ್ಲಿಷ್ ಮಾಡಿದರೆ ಒಟ್ಟಾರೆ ನಮ್ಮ ಸಾಂಸ್ಕೃತಿಕ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಕನ್ನಡಕ್ಕೆ ಕಂಟಕಪ್ರಾಯವಾದ ಇಂಥ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಮಾತೃಭಾಷೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡಬೇಕು.

ಆರ್. ವೆಂಕಟರಾಜು, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.