ADVERTISEMENT

ಫೇಸ್‌ಬುಕ್ ಫೇಕುದಾರರು

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 15:42 IST
Last Updated 17 ಸೆಪ್ಟೆಂಬರ್ 2020, 15:42 IST

ಫೇಸ್‌ಬುಕ್‌ನಲ್ಲಿ ನಕಲಿ ಖಾತೆಗಳ ಮೂಲಕ ಜನರನ್ನು ವಂಚಿಸುವ ಆರೋಪಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಈಗ ರಾಜ್ಯದ ಪ್ರಮುಖ ಪೊಲೀಸ್ ಅಧಿಕಾರಿಗಳ ಹೆಸರುಗಳಲ್ಲೂ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚಿಸುವ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ. ಈ ಕುರಿತು ಕೆಲವು ಪೊಲೀಸ್ ಠಾಣೆಗಳಲ್ಲಿ ದೂರುಗಳು ಸಹ ದಾಖಲಾಗಿವೆ.

ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಅಕೌಂಟ್‌ ತೆರೆಯುವ ವಂಚಕರು, ಫ್ರೆಂಡ್ ರಿಕ್ವೆಸ್ಟ್‌ ಕಳುಹಿಸಿ ನಂತರ ಮೆಸೆಂಜರಿನ ಮೂಲಕ ಸಂವಹನ‌ ನಡೆಸಿ, ಅಲ್ಲಿ ಅಧಿಕಾರಿಯ ಹೆಸರಿನಲ್ಲಿ ಸಂಘ ಸಂಸ್ಥೆಗಳಿಗೆ ಡೊನೇಷನ್ ಕೇಳುತ್ತಾರೆ. ಹೀಗೆ ಫೋನ್ ಪೇ, ಗೂಗಲ್ ಪೇ ಮೂಲಕ ಹಣ ಪೀಕುವುದು ಹೊಸ ಮಾದರಿಯ ವಂಚನೆಯಾಗಿದೆ.

ಸಾಮಾಜಿಕ ಸೇವಾ ಕಾರ್ಯಗಳಿಗೆ ಪೊಲೀಸ್‌ ಅಧಿಕಾರಿಯೇ ಡೊನೇಷನ್ ಕೇಳುತ್ತಿದ್ದಾರೆ ಎಂದು ನಂಬುವ ಜನ, ಸಾವಿರಾರು ರೂಪಾಯಿಯನ್ನು ಕ್ಷಣಮಾತ್ರದಲ್ಲಿ ವಂಚಕರ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಇದೊಂದು ದೊಡ್ಡ ದಂಧೆಯೇ ಆಗಿದೆ. ಜನ ಇಂತಹ ಖಾತೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಪೊಲೀಸ್ ಇಲಾಖೆಯು ಈ ವಂಚನೆಯ ಜಾಲವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು.

ADVERTISEMENT

ಲಕ್ಷ್ಮೀಕಾಂತರಾಜು ಎಂ.ಜಿ.,ಮಠಗ್ರಾಮ, ಗುಬ್ಬಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.