ರಸಗೊಬ್ಬರದ ಬೆಲೆಯನ್ನು ದಿಢೀರ್ ಏರಿಕೆ ಮಾಡಿರುವುದು ಸರಿಯಲ್ಲ. ಈಗಾಗಲೇ ಜನರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ದರ ಏರಿಕೆಯಿಂದ ತತ್ತರಿಸಿದ್ದಾರೆ. ಇದೀಗ ರಸಗೊಬ್ಬರದ ಬೆಲೆ ಏರಿಕೆ ಕಂಡು ರೈತರು ದಂಗಾಗಿದ್ದಾರೆ. ಬೆಲೆ ಏರಿಕೆಯಿಂದ ಕೃಷಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರ್ಕಾರ ಕೂಡಲೇ ಭಾರತೀಯ ರೈತರ ರಸಗೊಬ್ಬರ ಸಹಕಾರಿ ಸಂಸ್ಥೆ (ಇಫ್ಕೊ) ಜೊತೆ ಚರ್ಚಿಸಿ, ರೈತರ ಮೇಲಿನ ಆರ್ಥಿಕ ಭಾರ ಕಡಿಮೆ ಮಾಡಬೇಕು. ಕೃಷಿಕರಿಗೆ ಅನುಕೂಲ ಮಾಡಿಕೊಡಬೇಕು.
-ನಬಿಸಾಬ್ ಬಿಂಜವಾಡಗಿ, ದೋಟಿಹಾಳ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.