ADVERTISEMENT

ಗ್ರಾಮ ಅರಣ್ಯ ಸಮಿತಿ: ಅನುದಾನ ಬೇಕು

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 19:30 IST
Last Updated 30 ಜೂನ್ 2022, 19:30 IST

ಪ್ರತೀ ಗ್ರಾಮದಲ್ಲಿ ಇಲ್ಲವೇ ಮೂರು–ನಾಲ್ಕು ಗ್ರಾಮಗಳಿಗೊಂದು ಗ್ರಾಮ ಅರಣ್ಯ ಸಮಿತಿ ರಚಿಸಬೇಕು. 20– 40 ವರ್ಷಗಳ ಹಿಂದೆ ರಚಿಸಿದ ಗ್ರಾಮ ಅರಣ್ಯ ಸಮಿತಿಗಳು ಅಸ್ತಿತ್ವದಲ್ಲಿದ್ದರೂ, ಅರಣ್ಯ ಇಲಾಖೆಯ ಸಹಯೋಗ ಇಲ್ಲದಿರುವುದು ಕಂಡುಬರುತ್ತದೆ. ಸರ್ಕಾರವು ವಾರ್ಷಿಕ ಆಯವ್ಯಯದಲ್ಲಿ ಗ್ರಾಮ ಅರಣ್ಯ ಸಮಿತಿಗಳಿಗೆ ಸಮರ್ಪಕವಾಗಿ ಅನುದಾನ ಘೋಷಿಸದೇ ಇರುವುದು ಅರಣ್ಯಾಭಿವೃದ್ಧಿಗೆ ಅಡ್ಡಿಯಾಗಿದೆ.

ರಾಜ್ಯದ ಅರಣ್ಯ ಸಚಿವ ಉಮೇಶ ಕತ್ತಿ ಅವರು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಗ್ರಾಮ ಅರಣ್ಯ ಸಮಿತಿಗಳ ಸ್ಥಿತಿಗತಿ ಬಗ್ಗೆ ವಿಶೇಷ ಸಭೆ ಕರೆದು ಚರ್ಚಿಸಬೇಕು. ನಿರ್ದಿಷ್ಟ ಮೊತ್ತದ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಆ ಮೂಲಕ ಗ್ರಾಮ ಅರಣ್ಯ ಸಮಿತಿಗಳ ಪುನಶ್ಚೇತನಕ್ಕೆ ಒತ್ತು ನೀಡಬೇಕು.

-ಎಸ್‌.ಎನ್‌.ಅಮೃತ,ಪುತ್ತೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.