ADVERTISEMENT

ಮೂರನೇ ಅಲೆ ಎದುರಿಸಲು ಸಜ್ಜಾಗಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 19:30 IST
Last Updated 7 ಜುಲೈ 2021, 19:30 IST

‘ಕೊರೊನಾ ಮೂರನೇ ಅಲೆ ಆರಂಭವಾಗುವ ಮೊದಲು ಎರಡೂ ಡೋಸ್‌ ಲಸಿಕೆ ಪಡೆದರೆ ಒಳ್ಳೆಯದು, ಆದರೆ ಕನಿಷ್ಠ ಒಂದು ಡೋಸ್‌ ಲಸಿಕೆ ಪಡೆದಿದ್ದರೂ ಕೊರೊನಾ ವಿರುದ್ಧದ ಪ್ರತಿಕಾಯ ಸೃಷ್ಟಿಯಾಗಿರುತ್ತದೆ’ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್‌.ಮಂಜುನಾಥ್‌ ಹೇಳಿದ್ದಾರೆ. ದೇಶದಲ್ಲಿ ಮೂರನೇ ಅಲೆ ಆಗಸ್ಟ್‌ನಲ್ಲಿ ದಾಳಿ ಮಾಡಬಹುದೆಂದು ತಜ್ಞರು ಅಂದಾಜಿಸಿದ್ದಾರೆ. ಎರಡನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ 18ರಿಂದ 44 ವರ್ಷದೊಳಗಿನವರಿಗೆ ಲಸಿಕೆ ಹಾಕುವ ಕುರಿತು ಸರ್ಕಾರ ಚಿಂತನೆ ಮಾಡಿತಾದರೂ ಸೂಕ್ತ ಪ್ರಮಾಣದಲ್ಲಿ ಲಸಿಕೆಗಳನ್ನು ಪೂರೈಸಲು ಸಾಧ್ಯವಾಗಲಿಲ್ಲ. ಇದರಿಂದ ಆ ವಯೋಮಾನದ ಬಹುತೇಕರಿಗೆ ಲಸಿಕೆ ಪಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಮೂರನೇ ಅಲೆ ಅವರನ್ನು ಹೆಚ್ಚಾಗಿ ಬಾಧಿಸುವ ಭೀತಿಯಿದೆ.

ಸರ್ಕಾರವು ಲಸಿಕೆ ವಿಷಯದಲ್ಲಿ ಗಂಭೀರ ಚಿಂತನೆ ಮಾಡಿ, ಲಸಿಕೆ ಹಾಕಿಸಿಕೊಳ್ಳದವರಿಗೆ ಆದಷ್ಟು ಶೀಘ್ರದಲ್ಲಿ ಲಸಿಕೆ ಕೊಡುವ ವ್ಯವಸ್ಥೆ ಮಾಡಬೇಕು.

-ಬಸವರಾಜ ಹುಡೇದಗಡ್ಡಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT