ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಸರ್ಕಾರ ಇತ್ತೀಚೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ, ಬಹು ವರ್ಷಗಳಿಂದ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಉದ್ಯೋಗ ಆಕಾಂಕ್ಷಿಗಳಿಗೆ ಸಂತಸ ನೀಡಿದೆ. ಆದರೆ ದೈಹಿಕ ಶಿಕ್ಷಣದ ವಿಷಯದಲ್ಲಿ ಕೆ– ಸೆಟ್, ನೆಟ್, ಪಿಎಚ್.ಡಿ ಪಡೆದ ನಿರುದ್ಯೋಗಿಗಳ ಕನಸಿಗೆ ತಣ್ಣೀರೆರಚಿದೆ. 2007ರಿಂದ ಈಚೆಗೆ ದೈಹಿಕ ಶಿಕ್ಷಣ ನಿರ್ದೇಶಕರ ನೇಮಕಾತಿ ನಡೆದಿಲ್ಲ. ಹೀಗಾಗಿ ಸರ್ಕಾರ ಇತ್ತ ಗಮನಹರಿಸಿ, ಈ ನೇಮಕಾತಿ ನಡೆಸಿ, ಕಾಲೇಜುಗಳಲ್ಲಿ ಕ್ರೀಡಾ ಚಟುವಟಿಕೆಗಳು ಯಶಸ್ವಿಯಾಗಿ ನಡೆಯಲು ಸಹಕರಿಸಬೇಕು.
ಕುಮಾರ್ ಹೆಬ್ಬಾಲೆ, ಮದ್ದೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.