ADVERTISEMENT

ಸರ್ಕಾರಿ ಶಾಲೆಗಳ ನಿರ್ವಹಣೆಗೆ ಇರಲಿ ಆದ್ಯತೆ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 19 ಜುಲೈ 2020, 19:30 IST
Last Updated 19 ಜುಲೈ 2020, 19:30 IST

ಕೊರೊನಾ ಸೋಂಕಿನ ಕಾರಣದಿಂದ ರಾಜ್ಯದ ಸರ್ಕಾರಿ ಶಾಲೆಗಳಿಗೆ ಮೂರ್ನಾಲ್ಕು ತಿಂಗಳಿನಿಂದ ರಜೆ ಇರುವುದರಿಂದ ಕೆಲವು ಶಾಲೆಗಳು ನಿರ್ವಹಣೆ ಮತ್ತು ದುರಸ್ತಿ ಇಲ್ಲದೆ ಹದಗೆಟ್ಟಿವೆ. ಶಾಲೆಯ ಸುತ್ತಲಿನ ವಾತಾವರಣ ಕಲುಷಿತಗೊಂಡಿದೆ. ಕೆಲವು ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಶಾಲೆಗಳು ಪುನರಾರಂಭ ಆಗುವುದರೊಳಗಾಗಿ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಶಾಲೆಯ ಸುತ್ತಮುತ್ತ ಸ್ವಚ್ಛತೆಯ ಜೊತೆಗೆ, ಶಿಥಿಲಗೊಂಡ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯವನ್ನೂ ಪೂರ್ಣಗೊಳಿಸಲು ಮುಂದಾಗಬೇಕು.

– ರಘು ಅಗಸ್ತ್ಯ,ಅಜ್ಜಂಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT