ADVERTISEMENT

ಸುಳ್ಳು ಸುದ್ದಿಯಿಂದ ಮಾರ್ಗಸೂಚಿ ಉಲ್ಲಂಘನೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 19:30 IST
Last Updated 19 ಏಪ್ರಿಲ್ 2021, 19:30 IST

ದೇಶದೆಲ್ಲೆಡೆ ಕೊರೊನಾ ಸೋಂಕು ದಿನದಿನವೂ ಸಾವಿರಾರು ಜನರನ್ನು ಇನ್ನಿಲ್ಲದಂತೆ ಕಾಡುತ್ತಾ ಕೇಕೆ ಹಾಕುತ್ತಿರುವಾಗಲೇ ಫೇಸ್‌ಬುಕ್, ವಾಟ್ಸ್‌ಆ್ಯಪ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ‘ಕೊರೊನಾ ರೋಗವೇ ಇಲ್ಲ. ಇದೆಲ್ಲ ಬರೀ ಹಸಿ ಸುಳ್ಳು’ ಎಂಬಂತೆ ಕೆಲವರು ಬಿಂಬಿಸುತ್ತಿದ್ದಾರೆ. ಇಂತಹ ಸುಳ್ಳು ಸುದ್ದಿ ಹರಡುವವರಿಗೆ ನನ್ನ ಪ್ರಶ್ನೆ ಏನೆಂದರೆ, ನೀವು ಯಾವತ್ತಾದರೂ ಒಂದು ಬಾರಿಯಾದರೂ ಕೊರೊನಾ ರೋಗಿಗಳನ್ನು ಭೇಟಿ ಆಗಿದ್ದೀರಾ? ಅಥವಾ ಕೊರೊನಾದಿಂದ ಮೃತಪಟ್ಟವರ ಕುಟುಂಬದ ಸದಸ್ಯರನ್ನು ಕಂಡು, ಅವರ ಯಾತನೆ, ತೊಂದರೆ ಹಾಗೂ ದುಃಖವನ್ನು ವಿಚಾರಿಸಿದ್ದೀರಾ? ನಿಮ್ಮಂತಹವರ ಸುಳ್ಳು ಪ್ರಚಾರ, ವದಂತಿಗಳನ್ನು ನಂಬಿ ಅನೇಕರು ಕೋವಿಡ್‌ ಮಾರ್ಗಸೂಚಿಗಳನ್ನು ಗಾಳಿಗೆ ತೂರುತ್ತಾ ಬೇಕಾಬಿಟ್ಟಿ ತಿರುಗಾಡುತ್ತಿದ್ದಾರೆ. ಕೋವಿಡ್‌ ರೋಗದಿಂದ ಇಡೀ ವಿಶ್ವವೇ ಸಂಕಷ್ಟದಲ್ಲಿ ಸಿಲುಕಿದೆ. ಇದು ನಿಮ್ಮ ಅರಿವಿಗೆ ಬಂದಿಲ್ಲವೇ? ಸರ್ಕಾರವು ಇಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

- ಉಮೇಶ ಸಂ. ಹಿರೇಮಠ,ಬೈಲಹೊಂಗಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT