ADVERTISEMENT

ಮ್ಯೂಸಿಕಲ್‌ ಚೇರ್‌ನಂತಾದ ಹರಪನಹಳ್ಳಿ!

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 19:30 IST
Last Updated 18 ಡಿಸೆಂಬರ್ 2020, 19:30 IST

ನೂತನ ಉದ್ದೇಶಿತ ವಿಜಯನಗರ ಜಿಲ್ಲೆಗೆ ಹರಪನಹಳ್ಳಿ ತಾಲ್ಲೂಕನ್ನು ಹಂಚಿಕೆ ಮಾಡಲಾಗಿದೆ. ಬಹು ಹಿಂದಿನಿಂದಲೂ ಹರಪನಹಳ್ಳಿ ತಾಲ್ಲೂಕು ಬಳ್ಳಾರಿ ಜಿಲ್ಲೆಯಲ್ಲಿಯೇ ಉಳಿದಿತ್ತು. ಹಿಂದೆ ದಾವಣಗೆರೆ ಜಿಲ್ಲೆ ರಚನೆಯಾದಾಗ ಹರಪನಹಳ್ಳಿ ತಾಲ್ಲೂಕನ್ನು ದಾವಣಗೆರೆಗೆ ಸೇರ್ಪಡೆ ಮಾಡಲಾಗಿತ್ತು.

ಹೈದರಾಬಾದ್‌ ಕರ್ನಾಟಕಕ್ಕೆ ಸಂವಿಧಾನದ ವಿಧಿ 371ಜೆ ಅಡಿ ವಿಶೇಷ ಸ್ಥಾನಮಾನದ ಸೌಲಭ್ಯ ದೊರೆತಾಗ, ಹರಪನಹಳ್ಳಿ ತಾಲ್ಲೂಕು ಈ ಅವಕಾಶದಿಂದ ವಂಚಿತವಾಯಿತು. ಈ ಕಾರಣದಿಂದ ತಾಲ್ಲೂಕಿನ ಜನರ ಒತ್ತಡದ ಮೇರೆಗೆ ಹರಪನಹಳ್ಳಿ ತಾಲ್ಲೂಕನ್ನು ಮತ್ತೆ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಲಾಗಿತ್ತು.

ಪ್ರಸ್ತುತ ಬಳ್ಳಾರಿಯನ್ನು ವಿಭಜಿಸಿ ಹೊಸಪೇಟೆಯನ್ನು ಜಿಲ್ಲಾ ಕೇಂದ್ರ ಮಾಡುತ್ತಿರುವ ಸರ್ಕಾರವು ಹರಪನಹಳ್ಳಿಯನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಿದೆ. ಈ ಎಲ್ಲಾ ಬದಲಾವಣೆಗಳಿಂದ ಹರಪನಹಳ್ಳಿಗೆ ಜಿಲ್ಲಾ ಕೇಂದ್ರ ಒಂದು ರೀತಿ ಮ್ಯೂಸಿಕಲ್ ಚೇರ್‌ನಂತೆ ಆಗಿದೆ.

-ಲಕ್ಷ್ಮೀಕಾಂತರಾಜು ಎಂ.ಜಿ., ಮಠಗ್ರಾಮ, ಗುಬ್ಬಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.