ADVERTISEMENT

ಕೋವಿಡ್‌ನಿಂದ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ!

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 19:30 IST
Last Updated 18 ಜೂನ್ 2021, 19:30 IST

‘ಸಾರ್ವಜನಿಕ ಆರೋಗ್ಯ ಮತ್ತು ಒಕ್ಕೂಟ ವ್ಯವಸ್ಥೆ’ ಕುರಿತ ವಸಂತ ಶೆಟ್ಟಿ ಅವರ ಲೇಖನದಲ್ಲಿ (ಪ್ರ.ವಾ.,
ಜೂನ್‌ 18) ನಮ್ಮ ದೇಶದ ಆರೋಗ್ಯ ಸಮಸ್ಯೆಗಳ ಬಗ್ಗೆ ಸೂಕ್ತವಾಗಿ ವಿಶ್ಲೇಷಣೆ ಮಾಡಲಾಗಿದೆ. ಆದರೆ ಒಂದಂತೂ ನಿಜ; ಕೊರೊನಾ ದೆಸೆಯಿಂದ ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಆಮೂಲಾಗ್ರವಾಗಿ ಅಭಿವೃದ್ಧಿ ಹೊಂದಿದೆ! ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್‌ಗಳ ಸಂಖ್ಯೆ ಹೆಚ್ಚಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳು ಪ್ರಾರಂಭವಾಗುತ್ತಿವೆ. ಅತ್ಯಾಧುನಿಕ ವೆಂಟಿಲೇಟರ್‌ಗಳು ಮತ್ತು ಇತರ ವೈದ್ಯಕೀಯ ಉಪಕರಣಗಳ ಖರೀದಿ ಆಗುತ್ತಿದೆ. ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ನೇಮಕಾತಿ ಆಗುತ್ತಿದೆ. ಒಟ್ಟಾರೆ ಹೇಳುವುದಾದರೆ, ಸರ್ಕಾರಿ ಆಸ್ಪತ್ರೆಗಳು ಗಣನೀಯವಾಗಿ ಪ್ರಗತಿ ಹೊಂದುತ್ತಿವೆ. ಆದರೆ ಎಂದೋ ಆಗಬೇಕಾಗಿದ್ದ ಈ ರೀತಿಯ ಅಭಿವೃದ್ಧಿಗೆ ಕೋವಿಡ್‌ನಂತಹ ರೋಗ ಬರುವವರೆಗೆ ಕಾಯಬೇಕಾಗಿ ಬಂದದ್ದು ಒಂದು ವಿರೋಧಾಭಾಸದಂತೆ ಕಾಣುತ್ತದೆ.

- ಡಾ. ಕೆ.ಎಸ್.ಗಂಗಾಧರ, ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT