ADVERTISEMENT

ಸ್ವಾಗತಾರ್ಹ ಬೆಳವಣಿಗೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2020, 19:32 IST
Last Updated 10 ಮಾರ್ಚ್ 2020, 19:32 IST

ಪಶ್ಚಿಮಘಟ್ಟದ ಸೂಕ್ಷ್ಮ ಪರಿಸರದಲ್ಲಿ ಹಾದು ಹೋಗುವ ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆಯ ಪ್ರಸ್ತಾವವನ್ನು ರಾಜ್ಯ ವನ್ಯಜೀವಿ ಮಂಡಳಿ ತಿರಸ್ಕರಿಸಿರುವುದು (ಪ್ರ.ವಾ., ಮಾರ್ಚ್‌ 10) ಸ್ವಾಗತಾರ್ಹ ಬೆಳವಣಿಗೆ. ಲಕ್ಷಾಂತರ ಮರಗಳನ್ನು ಹನನ ಮಾಡಿ ನೂರಾರು ವನ್ಯಜೀವಿಗಳ ನೆಲೆಯನ್ನು ನಾಶ ಮಾಡಿ ರೈಲು ಮಾರ್ಗ ನಿರ್ಮಿಸುವ ಯೋಜನೆ ಅಪೇಕ್ಷಣೀಯವಲ್ಲ. ಕಾಡಿನಲ್ಲಿ, ಅದರಲ್ಲೂ ಪಶ್ಚಿಮಘಟ್ಟ ದಂತಹ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಅತ್ಯಂತ ಅಪಾಯಕಾರಿ.

–ಮಹೇಶ್ವರ ಹುರುಕಡ್ಲಿ, ಬಾಚಿಗೊಂಡನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT