ಭಾರತದಲ್ಲಿ ಪ್ರಾಮಾಣಿಕತೆಗೆ ಹೆಸರಾದ ಕಚೇರಿಯೆಂದರೆ ಅದು ಅಂಚೆ ಕಚೇರಿ ಎಂದು ಸಣ್ಣ ಮಕ್ಕಳೂ ಹೇಳುತ್ತಿದ್ದರು. ಆದರೆ ಈಗ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಸಿಕ್ಕಿಬಿದ್ದಿರುವ ಇಲಾಖೆಯ ನಾಲ್ವರು ಸಿಬ್ಬಂದಿಯ ಹೀನ ಕೃತ್ಯದಿಂದಾಗಿ ಇಡೀ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಈ ವ್ಯಕ್ತಿಗಳು ಸಂಸ್ಥೆಯಲ್ಲಿ ಇದ್ದುಕೊಂಡೇ ಸಂಸ್ಥೆಯನ್ನು ಉಪಯೋಗಿಸಿಕೊಂಡು ಇಂತಹ ದುಷ್ಕೃತ್ಯ ಎಸಗಿರುವುದು ಅಕ್ಷಮ್ಯ. ಇಂತಹ ಹಿತಶತ್ರುಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.
-ಬಾಲಕೃಷ್ಣ ಎಂ.ಆರ್.,ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.