ADVERTISEMENT

ಶಿಶುಮರಣ ಪ್ರಮಾಣ ತಗ್ಗಿಸಲು ತುರ್ತು ಕ್ರಮ ಅಗತ್ಯ

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 17:13 IST
Last Updated 13 ಜನವರಿ 2020, 17:13 IST

ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಲ್ಲಿ 57 ಸಾವಿರಕ್ಕೂ ಹೆಚ್ಚು ಶಿಶುಮರಣಗಳು ಸಂಭವಿಸಿರುವುದು ಆತಂಕಕಾರಿ (ಪ್ರ.ವಾ., ಜ. 9). ಮಕ್ಕಳ ಆರೋಗ್ಯ ರಕ್ಷಣೆಗೆಂದೇ ಕೋಟ್ಯಂತರ ರೂಪಾಯಿ ವೆಚ್ಚ ಮಾಡುವುದಾಗಿ ಲೆಕ್ಕ ತೋರಿಸುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ದೇಶದ ಅನೇಕ ಸರ್ಕಾರಿ ಹೆರಿಗೆ ಆಸ್ಪತ್ರೆಗಳಲ್ಲಿ ಅಗತ್ಯ ಮೂಲ ಸೌಕರ್ಯಗಳೇ ಇಲ್ಲದಿರುವ ನ್ಯೂನತೆಯನ್ನು ಗಂಭೀರವಾಗಿ ಪರಿಗಣಿಸಬೇಕು.

ನಮ್ಮ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿನ ಸುಧಾರಿತ ಸವಲತ್ತುಗಳು ಉಳ್ಳವರ ಮಾತ್ರ ಕೈಗೆಟುಕುವಂತೆ ಇರುವುದು ಈ ವರದಿಯಿಂದ ಸ್ಪಷ್ಟವಾಗಿ ಸಾಬೀತಾಗಿದೆ. ಬಡ-ಮಧ್ಯಮ ವರ್ಗದವರು ಅವಲಂಬಿಸಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಶಿಶುಮರಣ ಪ್ರಮಾಣ ತಗ್ಗಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಮೂಲಸೌಕರ್ಯ ವೃದ್ಧಿಗೆ ಗಮನ ಕೊಡಬೇಕು. ಇಲ್ಲವಾದಲ್ಲಿ, ಮಾನವರ ಕೊರತೆಯೊಂದಿಗೆ ಮಾನವ ಸಂಪನ್ಮೂಲ ಅಭಿವೃದ್ಧಿಯನ್ನು ಅಳೆಯುವ ಕಾಲವನ್ನು ಎದುರು ನೋಡಬೇಕಾದೀತು.

-ದಿನಮಣಿ ಬಿ.ಎಸ್., ಮೈಸೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.