ADVERTISEMENT

ಸಾಂಕ್ರಾಮಿಕ ರೋಗ: ನಿರ್ಲಕ್ಷ್ಯ ಬೇಡ, ವೈಜ್ಞಾನಿಕ ಕ್ರಮ ಅನುಸರಿಸಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2019, 20:01 IST
Last Updated 29 ಜುಲೈ 2019, 20:01 IST

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಲೇರಿಯಾ ಹಾಗೂ ಡೆಂಗಿ ರೋಗಗಳು ಉಲ್ಬಣಿಸಿವೆ. ಹಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಜನರು ಭೀತಿಯಿಂದ ದಿನ ಕಳೆಯುವಂತಾಗಿದೆ. ಕೊಳಚೆ ಪ್ರದೇಶ, ತೆರೆದ ಒಳಚರಂಡಿ, ಸೊಳ್ಳೆ ಉತ್ಪತ್ತಿ ಸ್ಥಳಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದು ಈ ರೋಗಗಳು ವ್ಯಾಪಕವಾಗಿ ಹರಡಲು ಕಾರಣವಾಗಿದೆ. ಜನರ ಆರೋಗ್ಯ ಕಾಪಾಡಲು ಇನ್ನಾದರೂ ಜಿಲ್ಲಾಡಳಿತಗಳು ಸಮರ್ಪಕ ಕಾರ್ಯಯೋಜನೆಯನ್ನು ರೂಪಿಸಿ ಕಾರ್ಯಪ್ರವೃತ್ತವಾಗಬೇಕು. ಆರೋಗ್ಯ ಇಲಾಖೆಯು ಸೊಳ್ಳೆ ನಾಶಕ್ಕೆ ಫಾಗಿಂಗ್, ಕ್ರಿಮಿನಾಶಕ ಸಿಂಪಡಣೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಭೆ ನಡೆಸುವುದು, ಬ್ಯಾನರ್ ಹಾಕುವುದು, ಅಭಿಯಾನ ಮಾಡುವುದರ ಮುಖಾಂತರ ಜನಜಾಗೃತಿ ಮೂಡಿಸಬೇಕು. ರೋಗದ ಮೂಲವನ್ನು ಪತ್ತೆ ಹಚ್ಚಿ, ಅದನ್ನು ನಾಶಪಡಿಸಲು ವೈಜ್ಞಾನಿಕ ಕ್ರಮಗಳನ್ನು ಅನುಸರಿಸಬೇಕು.

ನಾಗರಾಜ್ ಕುಲಾಲ್,ಪಣಕಜೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT