ADVERTISEMENT

ವಾಚಕರ ವಾಣಿ: ಮಹಿಳಾ ಸಬಲೀಕರಣಕ್ಕೆ ನಿದರ್ಶನ

​ಪ್ರಜಾವಾಣಿ ವಾರ್ತೆ
Published 31 ಮೇ 2022, 19:30 IST
Last Updated 31 ಮೇ 2022, 19:30 IST

ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2021ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ 685 ಜನರಲ್ಲಿ 177 ಮಹಿಳೆಯರು ಇರುವುದು, ಅದರಲ್ಲಿ ಮೊದಲ ಮೂರು ಸ್ಥಾನಗಳನ್ನು ಮಹಿಳೆಯರೇ ಪಡೆದಿರುವುದು ಸಂತೋಷದ ಸಂಗತಿ. ಇದು, ಮಹಿಳಾ ಸಬಲೀಕರಣಕ್ಕೆ ಉತ್ತಮ ಉದಾಹರಣೆ. ಚಿಕ್ಕ ವಯಸ್ಸಿನಲ್ಲೇ ಮದುವೆಗೆ ಒತ್ತಾಯಿಸುವ ಬದಲು, ಅವಳಿಗೆ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿ ಪ್ರೋತ್ಸಾಹಿಸಿದರೆ, ಯಶಸ್ಸು ಪಡೆಯುವುದು ಮಹಿಳೆಗೆ ದೊಡ್ಡ ಸಂಗತಿಯೇನಲ್ಲ.

- ಬಸನಗೌಡ ಪಾಟೀಲ, ಯರಗುಪ್ಪಿ, ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT