ADVERTISEMENT

ಉಡಾಫೆಯ ಹೇಳಿಕೆ ಸಲ್ಲದು

​ಪ್ರಜಾವಾಣಿ ವಾರ್ತೆ
Published 14 ಮೇ 2021, 19:31 IST
Last Updated 14 ಮೇ 2021, 19:31 IST

ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಬೇಜವಾಬ್ದಾರಿಯ ಹಾಗೂ ಉಡಾಫೆಯ ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಸಿ.ಟಿ.ರವಿ ಅವರ ಹೇಳಿಕೆ ನೇರ ನ್ಯಾಯಾಂಗ ನಿಂದನೆಯಾಗಿದ್ದು, ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕಾಗಿದೆ.‌ ಕೋವಿಡ್ ಲಸಿಕೆ ವಿತರಣೆಯಲ್ಲಿ ರಾಜ್ಯದಾದ್ಯಂತ ಉಂಟಾ ಗಿರುವ ಗೊಂದಲಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ. ನ್ಯಾಯಾಲಯಗಳು ಕೇವಲ ಪ್ರಕರಣಗಳ ವಿಚಾರಣೆ ನಡೆಸುವುದಕ್ಕೆ ಸೀಮಿತವಾಗದೆ ಜನರ ಕಷ್ಟಕಾರ್ಪಣ್ಯ, ದುಃಖ ದುಮ್ಮಾನಗಳನ್ನು ಪರಿಹರಿಸುವ ಮಹತ್ವದ ಜವಾಬ್ದಾರಿ ಹೊಂದಿವೆ.

ಕೋವಿಡ್ ಲಸಿಕೆಗಳ ಅಭಾವದಿಂದ ಜನರಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದೆ. ತಾವು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಎಂಬುದನ್ನು ರವಿ ಅವರು ಮರೆತಂತಿದೆ. ದೇಶದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬ ಸತ್ಯವನ್ನು ಅವರು ಅರಿಯಬೇಕಿದೆ.

–ಕೆ.ವಿ.ವಾಸು, ಮೈಸೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.