ADVERTISEMENT

ಕೆ–ಸೆಟ್‌ ಪರೀಕ್ಷೆ: ಎಂಎಫ್‌ಎ ಪದವೀಧರರಿಗೆ ಅವಕಾಶ ಕೊಡಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2018, 20:00 IST
Last Updated 28 ಡಿಸೆಂಬರ್ 2018, 20:00 IST

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯು (ಕೆ–ಸೆಟ್‌) ಡಿಸೆಂಬರ್ 30ರಂದು ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯಲಿದ್ದು, ಈ ಪರೀಕ್ಷೆಗೆ ಎಂ.ಎಫ್.ಎ (ಮಾಸ್ಟರ್ ಆಫ್ ಫೈನ್ ಆರ್ಟ್ಸ್‌) ಪದವೀಧರರನ್ನು ಪರಿಗಣಿಸದಿರುವುದು ಬೇಸರ ಮೂಡಿಸಿದೆ.

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಂದ ನೂರಾರು ವಿದ್ಯಾರ್ಥಿಗಳು ಈ ಶಿಕ್ಷಣ ಪಡೆದಿದ್ದಾರೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಇವರೆಲ್ಲರೂ ಉಪನ್ಯಾಸಕರ ಅರ್ಹತಾ ಪರೀಕ್ಷೆ ಬರೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಇವರಿಗೆಲ್ಲ ಉಪನ್ಯಾಸಕರ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಬರೆಯಲು ಅವಕಾಶ ನೀಡಿ, ಕೆ-ಸೆಟ್ ಬರೆಯಲು ಅವಕಾಶ ನೀಡದಿರುವುದು ವಿಪರ್ಯಾಸವೇ ಸರಿ.

ವಿಶ್ವವಿದ್ಯಾಲಯ ಧನಸಹಾಯ ಆಯೋಗವು ತಾರತಮ್ಯ ಧೋರಣೆಯನ್ನು ಬಿಟ್ಟು, ಎಂ.ಎಫ್.ಎ. ವಿದ್ಯಾರ್ಥಿಗಳಿಗೂ ಕೆ-ಸೆಟ್ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು.

ADVERTISEMENT

–ಭವ್ಯ ಎನ್., ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.