ADVERTISEMENT

ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ಸ್ವಾಗತಾರ್ಹ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2020, 20:00 IST
Last Updated 8 ಮಾರ್ಚ್ 2020, 20:00 IST

ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ₹ 29,768 ಕೋಟಿ ತೆಗೆದಿರಿಸಿರುವುದು ಸ್ವಾಗತಾರ್ಹ. ಶಿಕ್ಷಣವನ್ನು ಪ್ರಮುಖ ಆದ್ಯತಾ ವಲಯವಾಗಿ ಪರಿಗಣಿಸಿರುವುದು ಸಂತೋಷದ ಸಂಗತಿ. ಇದರ ಜೊತೆಗೆ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಮೂರು ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಎಲ್ಲ ಶಾಸಕರೂ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ.

ಶಿಕ್ಷಕರಿಗೆ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು ‘ಶಿಕ್ಷಕ ಮಿತ್ರ’ ಎಂಬ ಮೊಬೈಲ್‌ ಆ್ಯಪ್‌ ಅಭಿವೃದ್ಧಿಪಡಿಸುವ ಪ್ರಸ್ತಾಪವನ್ನೂ ಮಾಡಲಾಗಿದೆ. ಇದು ಹತ್ತರಲ್ಲಿ ಒಂದು ಎನ್ನುವಂತೆ ಆಗದಿರಲಿ. ಏಕೆಂದರೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಈಗಿರುವ ಸಾಫ್ಟ್‌ವೇರ್‌ಗಳು ಪದೇ ಪದೇ ಸರ್ವರ್ ಸಮಸ್ಯೆ ಮತ್ತು ತಾಂತ್ರಿಕ ಸಮಸ್ಯೆ ಎದುರಿಸುತ್ತಿವೆ. ಉದ್ದೇಶಿತ ‘ಶಿಕ್ಷಕ ಮಿತ್ರ’ ಆ್ಯಪ್ ಬಿಡುಗಡೆ ವಿಳಂಬವಾದರೂ ಅದು ಸುಸಜ್ಜಿತ, ದೋಷರಹಿತ ಮತ್ತು ಶಿಕ್ಷಕಸ್ನೇಹಿ ಆಗಿರಲಿ.

–ಸಿ.ಜಿ.ವೆಂಕಟೇಶ್ವರ,ಕ್ಯಾತಸಂದ್ರ, ತುಮಕೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.