ADVERTISEMENT

ವಾಚಕರ ವಾಣಿ: ಇರುವ ವಿ.ವಿ.ಗಳು ಪುನಶ್ಚೇತನಗೊಳ್ಳಲಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 19:31 IST
Last Updated 28 ಆಗಸ್ಟ್ 2022, 19:31 IST

ರಾಜ್ಯದಲ್ಲಿ ಹೊಸದಾಗಿ ಎಂಟು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿರುವುದು ವರದಿಯಾಗಿದೆ. ನಮ್ಮಲ್ಲಿ ಈಗಾಗಲೇ ಇರುವ ಅನೇಕ ವಿಶ್ವವಿದ್ಯಾಲಯಗಳಿಗೆ ಮೂಲಸೌಕರ್ಯಗಳನ್ನೇ ಒದಗಿಸಲಾಗಿಲ್ಲ. ಉದಾಹರಣೆಗೆ, ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಒಂದು ಶತಮಾನದಷ್ಟು ಹಳೆಯದಾದ ಪಾರಂಪರಿಕ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೆಲವೇ ಕೆಲವರನ್ನು ಹೊರತುಪಡಿಸಿ ಕಾಯಂ ಸಿಬ್ಬಂದಿ ಹಾಗೂ ಬೋಧಕ ವರ್ಗದವರೇ ಇಲ್ಲ. ಹಂಗಾಮಿಯಾಗಿ ಕೆಲಸ ನಿರ್ವಹಿಸುತ್ತಿದ್ದ 20ಕ್ಕೂ ಹೆಚ್ಚು ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಇವರೆಲ್ಲಾ ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ.

ರಾಜ್ಯದ ಅನೇಕ ವಿಶ್ವವಿದ್ಯಾಲಯಗಳು ಬೇಡದ ಕಾರಣಗಳಿಗಾಗಿ ಸುದ್ದಿಯಾಗುತ್ತಿವೆ. ಅಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಅನೇಕ ವಿಶ್ವವಿದ್ಯಾಲಯಗಳಲ್ಲಿ ಕುಲಪತಿ, ಕುಲಸಚಿವ ಹಾಗೂ ಅಧಿಕಾರಿಗಳ ನಡುವೆ ಸಾಮರಸ್ಯ ಇಲ್ಲದೆ ಅಧಿಕಾರಕ್ಕಾಗಿ ಕಚ್ಚಾಟ, ಮುಸುಕಿನೊಳಗಿನ ಗುದ್ದಾಟ ನಡೆಯುತ್ತಿದೆ. ರಾಜ್ಯ ಸರ್ಕಾರವು ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಬದಲು ಈಗ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಲಿ.

-ಕೆ.ವಿ.ವಾಸು, ಮೈಸೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.