ADVERTISEMENT

ಭಾಷೆಗಳೇ ಭಾರತದ ಶಕ್ತಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 6 ಅಕ್ಟೋಬರ್ 2020, 19:30 IST
Last Updated 6 ಅಕ್ಟೋಬರ್ 2020, 19:30 IST

ಕೇಂದ್ರ ಲೋಕಸೇವಾ ಆಯೋಗವು ಭಾನುವಾರ ನಡೆಸಿದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ನೀಡಿದ್ದರ ವಿರುದ್ಧ ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರಹಾಕಿದ್ದು ವರದಿಯಾಗಿದೆ (ಪ್ರ.ವಾ., ಅ. 5). ಯುಪಿಎಸ್‌ಸಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆದು ಪಾಸ್ ಮಾಡುತ್ತಾರೆ ಎಂದು ಹೇಳುವುದೇ ಶುದ್ಧ ಅಜ್ಞಾನ. ಏಕೆಂದರೆ ಅದರ ಪೂರ್ವಭಾವಿ ಪರೀಕ್ಷೆಯು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ನಡೆಯುತ್ತದೆ. ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದರೂ ಬಹುತೇಕ ಕೇಂದ್ರೀಯ ನೇಮಕಾತಿ ಪರೀಕ್ಷೆಗಳು ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಮಾತ್ರ ಇರುತ್ತವೆ. ಇದಕ್ಕೆ ಎಲ್ಲಾ ಪಕ್ಷಗಳ, ವಿಶೇಷವಾಗಿ ರಾಷ್ಟ್ರೀಯ ಪಕ್ಷಗಳ ಸಿದ್ಧಾಂತಗಳ ಕೊಡುಗೆಯೂ ಇದೆ. ಯಾರೂ ಬೆನ್ನು ಚಪ್ಪರಿಸಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಭಾರತದ ಭಾಷೆಗಳೇ ಭಾರತದ ಶಕ್ತಿ ಎನ್ನುವ ಸರಳವಾದ ಸತ್ಯ ಯಾರಿಗೂ ಅರ್ಥವಾಗುತ್ತಿಲ್ಲ.

ಶಾಲಾ ಶಿಕ್ಷಣ ಕನ್ನಡ ಮಾಧ್ಯಮದಲ್ಲಿಯೇ ಇರಬೇಕು ಎಂದು ಪ್ರತಿಪಾದಿಸುವವರು ಇಂತಹ ವಿಷಯಗಳ ಬಗ್ಗೆ ಧ್ವನಿ ಎತ್ತುವುದಿಲ್ಲ. ಶಾಲಾ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಪಡೆದವರು ಇದರ ನೇರ ಬಲಿಪಶುಗಳು. ಹೀಗೆ ಎಲ್ಲೆಡೆಯೂ ಅವಕಾಶಗಳ ಬಾಗಿಲುಗಳು ಮುಚ್ಚುತ್ತಿರುವಾಗ, ಕನ್ನಡ ಮಾಧ್ಯಮದ ಶಿಕ್ಷಣ ಹೇಗೆ ತನ್ನ ಆಕರ್ಷಣೆ ಉಳಿಸಿಕೊಳ್ಳಲು ಸಾಧ್ಯ?

- ಗಿರೀಶ್ ಎಂ.ಬಿ.,ಹೊಳಲ್ಕೆರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.