ADVERTISEMENT

ಅಭಿವೃದ್ಧಿ ಮಾದರಿ ಬದಲಾಗಲಿ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 19:31 IST
Last Updated 1 ಜನವರಿ 2021, 19:31 IST

‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾದರಿ ಶಾಲೆಗಳನ್ನು ಆರಂಭಿಸಲು ಚಿಂತನೆ ನಡೆದಿದೆ’ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ (ಪ್ರ.ವಾ., ಡಿ. 29). ಆದರೆ ಇಂತಹ ಶಾಲೆಗಳಿಗೆ ಬದಲಾಗಿ ಈಗಾಗಲೇ ಇರುವ, ಮೂಲ ಸೌಕರ್ಯ ವಂಚಿತ ಸಾವಿರಾರು ಕನ್ನಡ ಸರ್ಕಾರಿ ಶಾಲೆಗಳನ್ನು ಸುಸಜ್ಜಿತಗೊಳಿಸಿ, ಸಮಾಜದ ಎಲ್ಲ ವರ್ಗದ ಮಕ್ಕಳೂ ಈ ಶಾಲೆಗಳಿಗೆ ಪ್ರವೇಶ ಪಡೆಯುವಂತೆ ಮಾಡಬೇಕಾದ ಅನಿವಾರ್ಯ ಇದೆ. ನೂತನ ಗ್ರಾಮ ಪಂಚಾಯಿತಿ ಸದಸ್ಯರು ಕನ್ನಡ ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಹೊಣೆಯನ್ನು ಹೊತ್ತುಕೊಂಡರೆ, ಉದ್ದೇಶಿತ ಮಾದರಿ ಶಾಲೆಗಳಿಗೆ ಅಗತ್ಯವಾದ ಕೋಟ್ಯಂತರ ರೂಪಾಯಿಯನ್ನು ಉಳಿಸಿದಂತೆ ಆಗುತ್ತದೆ.

–ಡಾ. ಗುರುಪ್ರಸಾದ ಎಚ್.ಎಸ್., ಮರಿಯಮ್ಮನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT