ADVERTISEMENT

ಅರ್ಜಿ ಸಲ್ಲಿಸಿದ ದಿನವೇ ನೌಕರಿ ಖಾತರಿ!

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 19:21 IST
Last Updated 21 ಜುಲೈ 2021, 19:21 IST

ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ದ್ವಿತೀಯ ಪಿಯು ಪರೀಕ್ಷೆಯ ಅಂಕಗಳನ್ನಷ್ಟೇ ಮಾನದಂಡವನ್ನಾಗಿ ಪರಿಗಣಿಸಲಾಗುತ್ತಿದೆ. ಈ ವರ್ಷವಂತೂ 2,239 ವಿದ್ಯಾರ್ಥಿಗಳು 600ಕ್ಕೆ 600 ಅಂಕಗಳನ್ನು ಗಳಿಸಿದ್ದಾರೆ. ಇವರಲ್ಲಿ ಕೆಲವರು ಈ ಹುದ್ದೆಗೆ ಅರ್ಜಿ ಸಲ್ಲಿಸಿದರೆ, ಆ ದಿನವೇ ಅವರಿಗೆ ಸರ್ಕಾರಿ ನೌಕರಿ ಸಿಕ್ಕಂತೆಯೇ. ಹೀಗಾದರೆ ಹಿಂದಿನ ವರ್ಷಗಳಲ್ಲಿ ಓದಿದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಪಾಡೇನು?

ಇನ್ನು ಮುಂದಾದರೂ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಬೇಕು. ಇದರಿಂದ ಗ್ರಾಮೀಣ ಭಾಗದ ಅದೆಷ್ಟೋ ಅಭ್ಯರ್ಥಿಗಳಿಗೆ ಅವಕಾಶ ಸಿಕ್ಕಂತಾಗುತ್ತದೆ.

– ಮನು ಕೆ.ಬಿ.,ದೊಡ್ಡಕೋಡಿಹಳ್ಳಿ, ಬೇಲೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.