ಕರ್ನಾಟಕ ಕೃಷಿ ಉತ್ಪನ್ನಗಳ ಮಾರಾಟ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆಗೆ ತಿದ್ದುಪಡಿ ತರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಇದು ರೈತರ ಅಭಿವ್ಯಕ್ತಿ ಮತ್ತು ಆಯ್ಕೆಯ ಸ್ವಾತಂತ್ರ್ಯವನ್ನು ಎತ್ತಿಹಿಡಿಯುತ್ತದೆ. ಅವರ ಶ್ರಮಕ್ಕೆ ಸರಿಯಾದ ಬೆಲೆ ಎಲ್ಲಿ ಸಿಗುತ್ತದೋ ಅಲ್ಲಿ ಅವರು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುತ್ತದೆ. ಜೊತೆಗೆ, ಮಧ್ಯವರ್ತಿಗಳ ಕಪಿಮುಷ್ಟಿಯಿಂದ ರೈತರನ್ನು ಬಿಡುಗಡೆ ಮಾಡಲು ಇಚ್ಛಿಸಿರುವುದು, ದೇಶದ ಬೆನ್ನೆಲುಬನ್ನು ಸ್ವಲ್ಪ ಮಟ್ಟಿಗಾದರೂ ಗಟ್ಟಿಗೊಳಿಸುವ ಪ್ರಯತ್ನ ಎಂದು ಹೇಳಬಹುದು.
– ನಾಗೇಶ್ ಹರಳಯ್ಯ,ಕಲಬುರ್ಗಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.