ADVERTISEMENT

ವಾಚಕರ ವಾಣಿ| ಎಂಜಿನಿಯರಿಂಗ್‌ ಪ್ರವೇಶ: ಹೊರೆ ಮಾಡದಿರಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 21:01 IST
Last Updated 24 ಜೂನ್ 2022, 21:01 IST

ನಾನು ಎಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿನಿ. ನನ್ನಂಥ ಎಷ್ಟೋ ಬಡ ವಿದ್ಯಾರ್ಥಿಗಳಿಗೆ
ಉನ್ನತ ಶಿಕ್ಷಣ ಪಡೆಯುವಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುತ್ತದೆ. ಅದರ ನಡುವೆಯೂ ಎಂಜಿನಿಯರಿಂಗ್
ಪದವಿ ಪಡೆದು ದೇಶ ವಿದೇಆಶಗಳಲ್ಲಿ ಕೆಲಸ ಮಾಡಬೇಕೆನ್ನುವ ಮಹದಾಸೆ ಹೊಂದಿರುತ್ತಾರೆ. ಸಂಪೂರ್ಣ ಕರ್ನಾಟಕಕ್ಕೆ ಒಂದೇ ಎಂಜಿನಿಯರಿಂಗ್ ವಿಶ್ವವಿದ್ಯಾಲಯ (ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ) ಇದ್ದು, ಇದರ ಅಡಿ ಸರ್ಕಾರಿ ಕಾಲೇಜುಗಳಿಗಿಂತ ಖಾಸಗಿ ಕಾಲೇಜುಗಳೇ ಹೆಚ್ಚಾಗಿವೆ. ಎಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳು ಶುಲ್ಕ ಕಟ್ಟಲು ಹಣವಿಲ್ಲದೆ ಬ್ಯಾಂಕ್‌ನಲ್ಲಿ ಸಾಲ ಪಡೆದು ಪದವಿ
ಪಡೆಯುತ್ತಿರುತ್ತಾರೆ. ಹೀಗಿರುವಾಗ ಸರ್ಕಾರವು ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಶುಲ್ಕವನ್ನು
ಶೇಕಡ 10ರಷ್ಟು ಹೆಚ್ಚಿಸಲು ಮುಂದಾಗಿರುವುದು ಸರಿಯಲ್ಲ.

- ಭೂಮಿಕ ಬಿ.ಯು., ತೀರ್ಥಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT