ADVERTISEMENT

ವಾಚಕರ ವಾಣಿ| ಹೊರರಾಜ್ಯಗಳಲ್ಲಿ ಕನ್ನಡ ಸಂಸ್ಕೃತಿ ಉಳಿಸಿ

​ಪ್ರಜಾವಾಣಿ ವಾರ್ತೆ
Published 11 ಮೇ 2020, 14:45 IST
Last Updated 11 ಮೇ 2020, 14:45 IST

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊರರಾಜ್ಯಗಳಲ್ಲಿನ ಕನ್ನಡ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನವನ್ನು ಅನುದಾನದ ಕೊರತೆಯಿಂದ ಸ್ಥಗಿತಗೊಳಿಸಿದ್ದನ್ನು ತಿಳಿದು ಬೇಸರವಾಯಿತು. ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿನ ಕನ್ನಡ ಸ್ನಾತಕೋತ್ತರ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಶಿಷ್ಯವೇತನವು ಅಧ್ಯಯನದ ಅವಧಿಯ ಖರ್ಚುವೆಚ್ಚವನ್ನು ಭರಿಸಲು ನೆರವಾಗುತ್ತದೆ. ಒಂದು ವೇಳೆ ಈ ಶಿಷ್ಯವೇತನವನ್ನು ಸ್ಥಗಿತಗೊಳಿಸಿದರೆ ವಿದ್ಯಾರ್ಥಿಗಳ ಕೊರತೆಯಿಂದಾಗಿ ಆ ರಾಜ್ಯಗಳಲ್ಲಿನ ಕನ್ನಡ ಸ್ನಾತಕೋತ್ತರ ವಿಭಾಗಗಳು ಮುಚ್ಚುವ ಹಂತ ತಲುಪುವ ಅಪಾಯವೂ ಇದೆ.

ಹೊರರಾಜ್ಯಗಳಲ್ಲಿ ಕನ್ನಡದ ಬೇರುಗಳು ನೆಲೆಯೂರುವಂತೆ ಮಾಡಲು ಈ ಶಿಷ್ಯವೇತನವನ್ನು ಮುಂದುವರಿಸಿಕೊಂಡು ಹೋಗಬೇಕು.

– ಪ್ರೊ. ಸಿ.ಪಿ.ಸಿದ್ಧಾಶ್ರಮ,ಮೈಸೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.