ADVERTISEMENT

ವಾಚಕರ ವಾಣಿ| ಮಹತ್ವದ ಹೇಳಿಕೆ: ಜಾರಿಗೆ ಬದ್ಧತೆ ತೋರಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 6 ಸೆಪ್ಟೆಂಬರ್ 2022, 19:31 IST
Last Updated 6 ಸೆಪ್ಟೆಂಬರ್ 2022, 19:31 IST

ಖಾಲಿಯಾಗುವ ಶಿಕ್ಷಕ ಹುದ್ದೆಗಳಿಗೆ ತಕ್ಷಣವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಹಳ ಮಹತ್ವದ ಹೇಳಿಕೆ ನೀಡಿದ್ದಾರೆ (ಪ್ರ.ವಾ., ಸೆ. 6). ಇದು, ಮತ ಗಳಿಕೆಯ ರಾಜಕೀಯ ಹೇಳಿಕೆಯಾಗದೆ, ಕಾರ್ಯಗತ ವಾದಾಗ ಮಾತ್ರ ಅದಕ್ಕೊಂದು ಅರ್ಥ ಬರುತ್ತದೆ. ಏಕೆಂದರೆ ಅಗತ್ಯಕ್ಕೆ ಅನುಗುಣವಾಗಿ ಶಿಕ್ಷಕರಿಲ್ಲದೆ ನಮ್ಮ ಗ್ರಾಮಾಂತರ ಶಾಲೆಗಳು ಹಾಳಾಗುತ್ತಿವೆ. ಈ ಶಾಲೆಗಳಲ್ಲಿ ಕಲಿಯುತ್ತಿರುವವರು ಜನಸಾಮಾನ್ಯರ ಮಕ್ಕಳು ಎಂಬುದು ಸರ್ಕಾರದ ಗಮನದಲ್ಲಿರಬೇಕು. ಹೀಗಾಗಿ ಅಗತ್ಯಕ್ಕೆ ಅನುಗುಣವಾಗಿ ಶಿಕ್ಷಕರಿಲ್ಲದಿದ್ದರೆ ಜನಸಾಮಾನ್ಯರ ಮಕ್ಕಳ ಶಿಕ್ಷಣದ ಹಕ್ಕನ್ನೇ ಸರ್ಕಾರ ಕಸಿದುಕೊಂಡಂತಾಗುತ್ತದೆ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ವಿಪರೀತ ಕೊರತೆಯಿಂದಾಗಿ ಪಾಲಕರು ಖಾಸಗಿ ಶಾಲೆಗಳ ಕಡೆ ಮುಖ ಮಾಡುತ್ತಿದ್ದಾರೆ. ಇದರಿಂದಾಗಿಯೇ ನಮ್ಮ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ನಿರ್ಧಾರ ಜರೂರಾಗಿ ಕಾರ್ಯರೂಪಕ್ಕೆ ಬರಬೇಕಿದೆ.

- ಹುರುಕಡ್ಲಿ ಶಿವಕುಮಾರ,ಬಾಚಿಗೊಂಡನಹಳ್ಳಿ, ಹಗರಿಬೊಮ್ಮನಹಳ್ಳಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.