ಪಾಂಡವಪುರ ತಾಲ್ಲೂಕಿನಲ್ಲಿ ನಡೆದ ಅಪಘಾತಕ್ಕೆ ರಾಜ್ಯವೇ ಕಂಬನಿ ಮಿಡಿದಿದೆ. ಹಳೆಯ ಮತ್ತು ಸುಸ್ಥಿತಿಯಲ್ಲಿ ಇಲ್ಲದ ವಾಹನಗಳ ಬಳಕೆಯನ್ನು ಸ್ಥಗಿತಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಮುಂದಾಗಬೇಕು.
ಚಾಲನಾ ಪರವಾನಗಿ ಪಡೆಯಲು ಬರುವವರಿಗೆ, ತಾವು ಚಲಾಯಿಸಲು ಮುಂದಾಗುವ ವಾಹನದ ಬಗ್ಗೆ ಎಷ್ಟು ತಿಳಿವಳಿಕೆ ಇದೆ ಎಂಬ ಪರೀಕ್ಷೆಯನ್ನೂ ನಡೆಸುವುದು ಸೂಕ್ತ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.