ADVERTISEMENT

ಮಳೆಗಾಲದ ಸಂಕಷ್ಟ: ಬೇಕು ಶಾಶ್ವತ ಪರಿಹಾರ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 25 ಜುಲೈ 2021, 21:28 IST
Last Updated 25 ಜುಲೈ 2021, 21:28 IST

ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಮನೆಗಳು ಬಿದ್ದಿರುವುದು, ಭೂ ಕುಸಿತ, ಸೇತುವೆಗಳು ಜಲಾವೃತ, ಹಿನ್ನೀರಿಗೆ ಹಳ್ಳಿಗಳ ಮುಳುಗಡೆಯಂತಹ ಸುದ್ದಿಗಳನ್ನು ಗಮನಿಸುತ್ತಿದ್ದೇವೆ. ಪ್ರತೀ ಬಾರಿ ಇದೇ ಪರಿಸ್ಥಿತಿ ಉದ್ಭವಿಸುತ್ತಿದ್ದರೂ ಆಳುವ ಸರ್ಕಾರಗಳಿಗೆ ಮಾತ್ರ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ನದಿ ಪಾತ್ರದಲ್ಲಿ ಅತಿವೃಷ್ಟಿಯಾದಾಗಲೆಲ್ಲಾ ಜನ-ಜಾನುವಾರುಗಳ ಪರಿಸ್ಥಿತಿ ಹೇಳತೀರದಾಗಿದೆ. ಈ ವಿಷಯದಲ್ಲಿ ಸರ್ಕಾರದ ಇಚ್ಛಾಶಕ್ತಿಯ ಕೊರತೆ ಸ್ಪಷ್ಟವಾಗಿ ಕಾಣುತ್ತದೆ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚಿಸಲಿ.⇒

- ಶ್ರೀಧರ್ ಡಿ. ರಾಮಚಂದ್ರಪ್ಪ,ತುರುವನೂರು, ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT