ADVERTISEMENT

ಮುಖ್ಯಮಂತ್ರಿ ಬದಲಾವಣೆ ಎಷ್ಟು ಸರಿ?

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 27 ಜುಲೈ 2021, 19:30 IST
Last Updated 27 ಜುಲೈ 2021, 19:30 IST

ರಾಜ್ಯದಲ್ಲಿ ಕೋವಿಡ್ ಮೊದಲ ಮತ್ತು ಎರಡನೇ ಅಲೆಯಿಂದ ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿವೆ. ಲಾಕ್‌ಡೌನ್ ಪರಿಣಾಮವಾಗಿ ಲಕ್ಷಾಂತರ ಜನ ನಿರುದ್ಯೋಗಿಗಳಾಗಿದ್ದಾರೆ. ಬಹುತೇಕರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅತಿವೃಷ್ಟಿಯಿಂದ ಬದುಕು ಅತಂತ್ರವಾಗಿದೆ. ಇಂಥ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿ ವರಿಷ್ಠರು, ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಿಸುತ್ತಿರುವುದು ಸರಿಯಲ್ಲ.

ರಾಜ್ಯವನ್ನು ಸರಿದಾರಿಯಲ್ಲಿ ಮುನ್ನಡೆಸುವ ಹೊಣೆಗಾರಿಕೆ ಮುಖ್ಯಮಂತ್ರಿಯದ್ದಾಗಿರುತ್ತದೆ. ಭಾರತವು ಒಕ್ಕೂಟ ಗಣತಂತ್ರವಾಗಿದ್ದು, ರಾಜ್ಯಗಳು ಕೇಂದ್ರದ ಅಡಿಯಾಳಲ್ಲ ಎಂಬುದನ್ನು ಸಂವಿಧಾನದಲ್ಲಿಯೇ ಉಲ್ಲೇಖಿಸಲಾಗಿದೆ. ಜನರಿಂದ ಚುನಾಯಿತರಾಗಿರುವ, ಶಾಸಕಾಂಗವು ಶಾಸನಬದ್ಧವಾಗಿ ಆಯ್ಕೆ ಮಾಡಿರುವ ಮುಖ್ಯಮಂತ್ರಿಯನ್ನು ಸಂವಿಧಾನಾತ್ಮಕವಾಗಿ ತೆಗೆದುಹಾಕುವ ಹಕ್ಕು ಆಯಾ ಪಕ್ಷದ ಶಾಸಕರಿಗಿರುತ್ತದೆ. ಆದರೆ ಹೈಕಮಾಂಡ್ ಗದಾಪ್ರಹಾರ ಮಾಡಿರುವುದು ಸಂವಿಧಾನದ ಆಶಯಕ್ಕೆ ವ್ಯತಿರಿಕ್ತವಾದುದು. ಇದು ರಾಷ್ಟ್ರೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ

- ರುದ್ರೇಶ್ ಅದರಂಗಿ,ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.