ADVERTISEMENT

ವಾಚಕರ ವಾಣಿ: ಸಮಯೋಚಿತ ಚಿಕಿತ್ಸೆಯೇ ಮದ್ದು

​ಪ್ರಜಾವಾಣಿ ವಾರ್ತೆ
Published 28 ಮೇ 2021, 17:22 IST
Last Updated 28 ಮೇ 2021, 17:22 IST

ಕೋವಿಡ್– 19 ಎರಡನೇ ಅಲೆಯಲ್ಲಿ ಜನರನ್ನು ಹೆಚ್ಚಾಗಿ ಬಾಧಿಸುತ್ತಿರುವುದು ಕೊರೊನಾ ವೈರಸ್‍ನ ರೂಪಾಂತರಿ ತಳಿ. ಇದು ಅತ್ಯಂತ ಅಪಾಯಕಾರಿಯಾಗಿದ್ದು, ಹೆಚ್ಚು ಸಾವು-ನೋವುಗಳಿಗೆ ಕಾರಣವಾಗಿದೆ. ಜನರು ಸೋಂಕಿನ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಮನೆಯಲ್ಲಿಯೇ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಆರೋಗ್ಯ ಗಂಭೀರ ಹಂತ ತಲುಪಿದಾಗ ಆಸ್ಪತ್ರೆಗೆ ಬರುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿ ಸ್ಥಳೀಯ ವೈದ್ಯರು ಇಂತಹ ಸೋಂಕಿತರನ್ನು ತಕ್ಷಣಕ್ಕೆ ಮೇಲ್ದರ್ಜೆಯ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್‌ಗಳಿಗೆ ಕಳಿಸದೆ ತಮ್ಮ ಹಂತದಲ್ಲಿಯೇ ಲಭ್ಯವಿರುವ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಸೋಂಕಿನ ಆರಂಭಿಕ ಹಂತದಲ್ಲಿಯೇ ಸ್ಟೆರಾಯ್ಡ್‌ಗಳನ್ನು ನೀಡುತ್ತಿರುವುದರಿಂದ ಆರಂಭದಲ್ಲಿ ರೋಗಿಯು ಗುಣಮುಖನಾದಂತೆ ಕಂಡರೂ ನಂತರದ ದಿನಗಳಲ್ಲಿ ಸೋಂಕು ಉಲ್ಬಣಗೊಳ್ಳುತ್ತಿದೆ. ಇದರಿಂದ ಸೋಂಕಿತರು ಬಹಳ ದಿನಗಳವರೆಗೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯಬೇಕಾದ ಹಾಗೂ ಲಕ್ಷಗಟ್ಟಲೇ ಹಣವನ್ನು ವ್ಯಯಿಸಬೇಕಾದ ಅನಿವಾರ್ಯ ಸ್ಥಿತಿ ಬರುತ್ತಿದೆ. ಹೀಗಾಗಿ ಕೋವಿಡ್ ಸೋಂಕಿಗೆ ಆರಂಭಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆಯುವ ಬಗ್ಗೆ ಆರೋಗ್ಯ ಕಾರ್ಯಕರ್ತರು, ವೈದ್ಯಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಯು ಜನರಲ್ಲಿ ಸೂಕ್ತ ಅರಿವು ಮೂಡಿಸಬೇಕಾಗಿದೆ.

-ಡಾ. ಎಸ್.ಎಂ.ತಿಮ್ಮಾಪೂರ,ವಿಜಯಪುರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.