ADVERTISEMENT

ವಾಚಕರವಾಣಿ: ಬಿಬಿಎಂಪಿ ಬೇಗ ಚುನಾವಣೆ ನಡೆಸಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 19:30 IST
Last Updated 29 ಜುಲೈ 2022, 19:30 IST

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್‌ಗಳ ಮೀಸಲಾತಿ ಅಧಿಸೂಚನೆಯನ್ನು ವಾರ ದೊಳಗೆ ಪ್ರಕಟಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿರುವುದು ಸರಿಯಾಗಿದೆ. ಚುನಾ ವಣೆಯನ್ನು ಮುಂದೂಡಲು ಸರ್ಕಾರ ನಾನಾ ಬಗೆಯ ಹುನ್ನಾರ ನಡೆಸಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಸ್ಥಳೀಯ ಸಂಸ್ಥೆಗಳಿಗೆ ಕಾಲಕಾಲಕ್ಕೆ ಚುನಾವಣೆಯನ್ನು ನಡೆಸಬೇಕು ಎಂದು ನ್ಯಾಯಾಲಯಗಳು ಪದೇ ಪದೇ ಹೇಳಿವೆ. ಆದರೆ ಅದು ಪಾಲನೆಯಾಗುತ್ತಿಲ್ಲ. ವಾರ್ಡ್‌ಗಳ ಪರಿಷ್ಕರಣೆ, ಮೀಸಲಾತಿಯಂತಹ ನೆವಗಳನ್ನು ಮುಂದಿಟ್ಟು ಚುನಾವಣೆ ಮುಂದೂಡುವುದು ಅಧಿಕಾರಸ್ಥರ ಚಾಳಿ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಶಾಸಕರಿಗೆ ಬೇಕಾಗಿಲ್ಲ. ಅವರ ತಾಳಕ್ಕೆ ತಕ್ಕಂತೆ ಸರ್ಕಾರ ಕುಣಿಯುತ್ತದೆ. ರಾಜಕಾರಣದಲ್ಲಿ ಸೋಲು–ಗೆಲುವು ಇದ್ದೇ ಇದೆ. ಅದನ್ನು ಬಂದಂತೆ ಸ್ವೀಕರಿಸುವ ಪ್ರಬುದ್ಧತೆಯನ್ನು ರಾಜಕೀಯ ಪಕ್ಷಗಳು ಬೆಳೆಸಿಕೊಳ್ಳಬೇಕು. ಬಿಬಿಎಂಪಿಗೆ ತ್ವರಿತವಾಗಿ ಚುನಾವಣೆ ನಡೆಸಲು ಸರ್ಕಾರ ಬದ್ಧತೆ ತೋರಲಿ.

- ನವೀನ್‌ಕುಮಾರ್‌ ಕೆ.ಟಿ.,ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.