ADVERTISEMENT

ವಾಚಕರ ವಾಣಿ: ಧೈರ್ಯವಾಗಿ ಬದುಕು ಕಟ್ಟಿಕೊಳ್ಳುವಂತಾಗಲಿ

​ಪ್ರಜಾವಾಣಿ ವಾರ್ತೆ
Published 13 ಮೇ 2022, 22:00 IST
Last Updated 13 ಮೇ 2022, 22:00 IST

ಕಾಶ್ಮೀರದಲ್ಲಿ ಉಗ್ರನೊಬ್ಬ ತಹಶೀಲ್‌ ಕಚೇರಿಗೆ ನುಗ್ಗಿ ಕಾಶ್ಮೀರಿ ಪಂಡಿತ ಸಮುದಾಯದ ನೌಕರರೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿರುವ ವರದಿ (ಪ್ರ.ವಾ., ಮೇ 13) ಓದಿ ದುಃಖವಾಯಿತು. ಕಾಶ್ಮೀರದ ರಕ್ತಸಿಕ್ತ ಇತಿಹಾಸವನ್ನು ಯಾವ ಪ್ರಜ್ಞಾವಂತ ಸಮಾಜವೂ ಕ್ಷಮಿಸುವುದಿಲ್ಲ. ಇಸ್ಲಾಂ ಮೂಲಭೂತವಾದಿಗಳು ಇನ್ನಾದರೂ ಬದಲಾಗಬೇಕು. ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯಲು ಭಾರತ ಸರ್ಕಾರವು ಅಂತರರಾಷ್ಟ್ರೀಯ ಮಟ್ಟದ ಪ್ರಯತ್ನವನ್ನು ತೀವ್ರಗೊಳಿಸಬೇಕು. ಜಮ್ಮು–ಕಾಶ್ಮೀರದಲ್ಲಿ ಉದ್ಯೋಗ, ಮೂಲ ಸೌಕರ್ಯಗಳನ್ನು ಒದಗಿಸಬೇಕು. ಉಗ್ರಗಾಮಿಗಳನ್ನು ನಿರ್ದಾಕ್ಷಿಣ್ಯವಾಗಿ ಸದೆಬಡಿಯಬೇಕು. ಭಾರತೀಯರಾದ ಎಲ್ಲ ಧರ್ಮದವರೂ ಅಲ್ಲಿ ಧೈರ್ಯವಾಗಿ ಬದುಕು ಕಟ್ಟಿಕೊಳ್ಳುವ ಸಹಜ, ಶಾಂತಿಯುತ ವಾತಾವರಣ ನಿರ್ಮಾಣವಾಗಬೇಕು.

ಎಚ್.ಎನ್.ಕಿರಣ್ ಕುಮಾರ್,ಹಳೇಹಳ್ಳಿ, ಗೌರಿಬಿದನೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT