ADVERTISEMENT

ವಾಚಕರ ವಾಣಿ: ಖಾದ್ಯ ತೈಲ ಬೆಲೆ ಏರಿಕೆ ನಿಯಂತ್ರಿಸಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 23:30 IST
Last Updated 4 ಮಾರ್ಚ್ 2022, 23:30 IST

ಉಕ್ರೇನ್‌ ಮೇಲೆ ರಷ್ಯಾ ನಡೆಸಿರುವ ದಾಳಿಯ ಪರಿಣಾಮವಾಗಿ, ಉಕ್ರೇನ್‌ನಿಂದ ನಮ್ಮ ದೇಶಕ್ಕೆ ವ್ಯಾಪಕವಾಗಿ ಆಮದಾಗುತ್ತಿದ್ದ ಸೂರ್ಯಕಾಂತಿ ಎಣ್ಣೆಯ ಪೂರೈಕೆಯಲ್ಲಿ ಕೊರತೆಯಾಗಿದೆ. ಹೀಗಾಗಿ, ಖಾದ್ಯ ತೈಲಗಳ ಬೆಲೆ ಲೀಟರಿಗೆ ₹ 25ಕ್ಕಿಂತಲೂ ಅಧಿಕ ಹೇರಿಕೆಯಾಗಿದೆ. ಯುದ್ಧ ಮುಂದುವರಿದರೆ ಮುಂದಿನ ದಿನಗಳಲ್ಲಿ ಖಾದ್ಯ ತೈಲ, ಪೆಟ್ರೋಲ್, ಡಿಸೇಲ್ ಬೆಲೆ ಇನ್ನಷ್ಟು ಹೆಚ್ಚಬಹುದೆನ್ನುವ ಆತಂಕವಿದೆ. ಮುಂದಿನ ದಿನಗಳಲ್ಲಿ ಜನಸಾಮಾನ್ಯರ ಹಿತದೃಷ್ಟಿಯಿಂದ ಖಾದ್ಯ ತೈಲವನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುವುದು, ಅಕ್ರಮ ದಾಸ್ತಾನು ತಡೆಗಟ್ಟುವುದು, ನ್ಯಾಯಬೆಲೆ ಅಂಗಡಿಗಳ ಮೂಲಕ ಪೂರೈಸುವಂತಹ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು.

ಉದಯ ಮ. ಯಂಡಿಗೇರಿ, ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT