ADVERTISEMENT

ವಾಚಕರ ವಾಣಿ: ಶಿಕ್ಷಣ, ಆರೋಗ್ಯ ಕ್ಷೇತ್ರ ಸುಧಾರಣೆಗೆ ಬೇಕು ಇಚ್ಛಾಶಕ್ತಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 22:15 IST
Last Updated 1 ನವೆಂಬರ್ 2021, 22:15 IST

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ನಮ್ಮ ಸರ್ಕಾರಗಳು ಕೊಡಬೇಕಾದಷ್ಟು ಗಮನ ಕೊಟ್ಟಿಲ್ಲ. ದೂರದೃಷ್ಟಿ ಇಲ್ಲದ ರಾಜಕಾರಣಿಗಳು ಈ ಎರಡೂ ಕ್ಷೇತ್ರಗಳನ್ನು ನಿರ್ಲಕ್ಷಿಸುತ್ತಲೇ ಬಂದಿದ್ದಾರೆ. ಈ ಮೂಲಕ ದೇಶವನ್ನು
ದುರ್ಬಲಗೊಳಿಸುತ್ತಿದ್ದಾರೆ. ಶಿಕ್ಷಕರ ಕೊರತೆ ವಿಪರೀತ ಇದೆ. ಕಾಲಕಾಲಕ್ಕೆ ಶಿಕ್ಷಕರ ನೇಮಕಾತಿ ಮಾಡದೇ ಇರುವುದರಿಂದ ಈ ಸ್ಥಿತಿ ಉಂಟಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡದಿದ್ದರೆ ಅವರ ಭವಿಷ್ಯ ಏನಾಗಬಹುದು? ಅಭಿವೃದ್ಧಿಗೂ ತೊಡರುಗಾಲು!

ಶಿಕ್ಷಕರ ಕೊರತೆ ನೀಗುವುದರ ಜೊತೆಗೆ ಶಾಲಾ ಕಟ್ಟಡಗಳು, ಗ್ರಂಥಾಲಯ, ಪ್ರಯೋಗಾಲಯ, ಶೌಚಾಲಯ ದಂತಹ ಅತಿ ಅವಶ್ಯಕ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಅದಕ್ಕೆ ಬೇಕಾದ ಅನುದಾನ ಒದಗಿಸಬೇಕು. ಸರ್ಕಾರಿ ಶಾಲೆಗಳ ಸ್ಥಿತಿಗತಿ ಬಗೆಗೆ ಮಾಧ್ಯಮಗಳು ವಿಶೇಷ ವರದಿಗಳನ್ನು ಪ್ರಕಟಿಸುವ ಮೂಲಕ ಸರ್ಕಾರದ ಕಣ್ಣು ತೆರೆಸಬೇಕು. ಆಳುವ ವರ್ಗದ ಕಣ್ಣು ತೆರೆಸುವ ಕೆಲಸವನ್ನು ಸಾರ್ವಜನಿಕರೂ ಮಾಡಬೇಕು.

ಬಿ. ರಾಜ್‌ಕುಮಾರ್‌,ಕೆಂಗೇರಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.