ADVERTISEMENT

ವಾಚಕರ ವಾಣಿ: ಸರ್ಕಾರಿ ಶಾಲೆ ವೈಭೋಗ ಮರುಕಳಿಸಲಿ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2021, 21:45 IST
Last Updated 4 ನವೆಂಬರ್ 2021, 21:45 IST

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುತ್ತಿದ್ದ ಪೋಷಕರೀಗ ಕೊರೊನಾ ಕಾರಣಕ್ಕೆ ಕಳೆದ ವರ್ಷದಿಂದ ಖಾಸಗಿ ಶಾಲೆಗಳ ದುಬಾರಿ ಶುಲ್ಕ, ಸರಿಯಾಗಿ ನಡೆಯದ ತರಗತಿಯಂಥ ಕಾರಣಗಳಿಂದ ಬೇಸತ್ತು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ತಮ್ಮೂರಿನ ಸರ್ಕಾರಿ ಶಾಲೆಗಳಿಗೆ ದಾಖಲಿಸಿರುವುದು ಸಂತಸದ ಸುದ್ದಿ. ಆದರೆ ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳು ಹಾಗೂ ಶೌಚಾಲಯಗಳ ಕೊರತೆ ಎದ್ದುಕಾಣುತ್ತಿದೆ. ಆದರೂ ಸರ್ಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆ ತಳೆದಿದೆ.

ಕೆಲವು ವರ್ಷಗಳಿಂದ ಮಕ್ಕಳಿಲ್ಲದೆ ಎಷ್ಟೋ ಶಾಲೆಗಳಿಗೆ ಶಾಶ್ವತ ಬೀಗ ಬಿದ್ದಾಗಿತ್ತು. ಮಕ್ಕಳೇ ಇಲ್ಲ ಕೊಠಡಿಗಳೇಕೆ ಎಂದು ಸರ್ಕಾರ ನಿರ್ಲಕ್ಷ್ಯ ತೋರಿತ್ತು. ಬಹುತೇಕ ಕಡೆ ಈ ವರ್ಷ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಶಾಲೆಗೆ ಸೇರಿದ ಯಾವ ಮಗುವೂ ಶಾಲೆ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕಾದರೆ, ಸರ್ಕಾರ ಶಾಲೆಗಳಿಗೆ ಬೇಕಿರುವ ಮೂಲಸೌಕರ್ಯ ಒದಗಿಸಿಕೊಡಬೇಕು. ಆಗ ಸರ್ಕಾರಿ ಶಾಲೆಗಳ ವೈಭವವನ್ನು ಮತ್ತೆ ಕಣ್ತುಂಬಿಕೊಳ್ಳಬಹುದು.

ಶಿವಕುಮಾರ್ ಯರಗಟ್ಟಿಹಳ್ಳಿ,ಚನ್ನಗಿರಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.