ADVERTISEMENT

ವಾಚಕರವಾಣಿ: ಮರಗಳನ್ನು ಬೆಳೆಸಲು ಉತ್ತೇಜಿಸಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 19:30 IST
Last Updated 24 ಜುಲೈ 2022, 19:30 IST

ಹೆಚ್ಚುತ್ತಿರುವ ನಗರೀಕರಣವು ಪರಿಸರಕ್ಕೆ ಗಂಭೀರ ಅಪಾಯ ತಂದೊಡ್ಡುತ್ತಿದೆ. ನಗರಗಳಲ್ಲಿ ಹಸಿರು ದಿನೇ ದಿನೇ ಕಣ್ಮರೆಯಾಗುತ್ತಿರುವುದೇ ಇದಕ್ಕೆ ಕಾರಣ. ಇದನ್ನು ತಡೆಯುವುದು ಅಗತ್ಯ. ಜಾರ್ಖಂಡ್ ರಾಜ್ಯ ಸರ್ಕಾರವು ಮರಗಳನ್ನು ಬೆಳೆಸಿದವರಿಗೆ ಐದು ಯೂನಿಟ್‌ ವಿದ್ಯುತ್‌ ಅನ್ನು ಉಚಿತವಾಗಿ ಪೂರೈಸುವುದಾಗಿ ಘೋಷಿಸಿದೆ. ಇದು ಅನುಕರಣೀಯ ಮಾದರಿ. ನಮ್ಮ ರಾಜ್ಯ ಸರ್ಕಾರ ಕೂಡ ಈ ದಿಸೆಯಲ್ಲಿ ಯೋಚಿಸಬೇಕು.

ಪರಿಸರ ಸಂರಕ್ಷಣೆಗೆ ಪೂರಕವಾಗಿ ಒದಗಿಬರುವ ಮರಗಳನ್ನು ಬೆಳೆಸಿದವರಿಗೆ ಮಾತ್ರ ಈ ಕೊಡುಗೆ ಅನ್ವಯಿಸು ತ್ತದೆ ಎಂದು ಜಾರ್ಖಂಡ್ ಸರ್ಕಾರ ಹೇಳಿದೆ. ಈ ಅಂಶವನ್ನು ಕೂಡ ಗಮನದಲ್ಲಿ ಇರಿಸಿಕೊಳ್ಳುವುದು ಉಚಿತ.

- ವಿಜಯಕುಮಾರ್ ಎಚ್.ಕೆ., ರಾಯಚೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.