ADVERTISEMENT

ನಷ್ಟ ವಸೂಲಿ ಮಾಡಲಿ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 19:51 IST
Last Updated 29 ಜನವರಿ 2020, 19:51 IST

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ ವೇಳೆ, ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್‌ ಮತ್ತು ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ₹82 ಕೋಟಿ ನಷ್ಟ ಉಂಟಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ತಿಳಿಸಿರುವುದಾಗಿ ವರದಿಯಾಗಿದೆ (ಪ್ರ.ವಾ., ಜ.28). ಈ ಪೈಕಿ ಹೆಚ್ಚು ಹಾನಿಯಾಗಿರುವುದು ಕೆಎಸ್ಆರ್‌ಟಿಸಿ ಬಸ್‌ಗಳಿಗೆ. ನಿಗಮವು ಬಸ್‌ಗಳನ್ನು ಖರೀದಿಸುವುದು ಸಾರ್ವಜನಿಕರ ತೆರಿಗೆ ಹಣದಿಂದಲೇ ಎಂಬುದನ್ನು ಪ್ರತಿಭಟನಕಾರರು ಮರೆಯಬಾರದು. ಆದ್ದರಿಂದ ಸರ್ಕಾರ ಈ ನಿಟ್ಟಿನಲ್ಲಿ ತನಿಖೆ ನಡೆಸಿ, ಈ ರೀತಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವವರಿಂದಲೇ ನಷ್ಟವನ್ನು ವಸೂಲಿ ಮಾಡಬೇಕು. ಆಗ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಸಾಧ್ಯ.

- ಕಿರಣ ಎಸ್.,ಹಗರಿಬೊಮ್ಮನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT