ADVERTISEMENT

ಗಣಿತ ದಿನವನ್ನು ಮಹತ್ವದ್ದಾಗಿಸಬೇಕು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 19:30 IST
Last Updated 22 ಡಿಸೆಂಬರ್ 2021, 19:30 IST

ಶ್ರೀನಿವಾಸ ರಾಮಾನುಜನ್ ಅವರು ಗಣಿತಕ್ಕೆ ನೀಡಿದ ಕೊಡುಗೆ ಮತ್ತು ಅವರ ಸಾಧನೆಗಳನ್ನು ಗುರುತಿಸಿ ಪ್ರತಿವರ್ಷ ಡಿಸೆಂಬರ್ 22 ರಂದು (ಅವರ ಹುಟ್ಟುಹಬ್ಬದ ಸವಿ ನೆನಪಿಗಾಗಿ) ರಾಷ್ಟ್ರೀಯ ಗಣಿತ ದಿನವನ್ನು ಆಚರಿಸಲಾಗುತ್ತದೆ.

ಗಣಿತ ದಿನ ಆಚರಣೆಯಂದು ಶಾಲೆಗಳಲ್ಲಿ ಶಿಬಿರಗಳ ಮೂಲಕ ಗಣಿತ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ತರಬೇತಿ ಆಯೋಜಿಸಬೇಕು. ಗಣಿತ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ನಮ್ಮದೇ ದೇಶದ ಗಣಿತ ತಜ್ಞ ಶ್ರೀನಿವಾಸ ರಾಮಾನುಜನ್‌ ಅವರ ಕೊಡುಗೆಗಳನ್ನು ಯುವ ಪೀಳಿಗೆಗೆ ತಿಳಿಸಬೇಕು. ಜತೆಗೆ ಯುವ ಪೀಳಿಗೆಯಲ್ಲಿ ಸ್ವಯಂ ಕಲಿಕೆ ಮತ್ತು ತಾರ್ಕಿಕ ಕೌಶಲಗಳನ್ನು ಅಭಿವೃದ್ಧಿಪಡಿಸಲು ಪ್ರೋತ್ಸಾಹಿಸುವ ಮೂಲಕ ಈ ದಿನವನ್ನು ಮಹತ್ವದ್ದಾಗಿಸಬೇಕು.

-ವೀರೇಶ ಎಸ್‌.ಎಸ್‌, ಬನ್ನಿಹಟ್ಟಿ, ಬಳ್ಳಾರಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.