ADVERTISEMENT

ವೈದ್ಯಕೀಯ ಮೀಸಲಾತಿ: ಮಾದರಿ ನಡೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 19:30 IST
Last Updated 2 ನವೆಂಬರ್ 2020, 19:30 IST

‘ನೀಟ್‌’ ತೇರ್ಗಡೆಯಾಗಿರುವ, ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ ಪ್ರವೇಶದಲ್ಲಿ ಶೇ 7.5ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ತಮಿಳುನಾಡಿನ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ (ಪ್ರ.ವಾ., ಅ. 31). ಇದು ಒಳ್ಳೆಯ ಹೆಜ್ಜೆ. ಜೊತೆಗೆ ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಮತ್ತು ಪ್ರವೇಶ ಸಂಖ್ಯೆ ಹೆಚ್ಚಿಸಲು ಸಹಕಾರಿ. ಈ ಬಗೆಯ ಪ್ರಯತ್ನಕ್ಕೆ ನಮ್ಮ ರಾಜ್ಯವೂ ಮುಂದಾದರೆ ಒಳ್ಳೆಯದು.

- ಗೊಡಬನಹಾಳ್ ಮಲ್ಲಿಕಾರ್ಜುನ,ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT