ADVERTISEMENT

‘ಮೈತ್ರಿ ಕಪ್‌’: ಯೋಜನೆ ವಿಸ್ತರಿಸಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 8 ಜುಲೈ 2022, 19:31 IST
Last Updated 8 ಜುಲೈ 2022, 19:31 IST

ಈ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದಂತೆ, ಹದಿಹರೆಯದ ಹೆಣ್ಣು ಮಕ್ಕಳಿಗೆ ಮುಟ್ಟಿನ ಕಪ್ ವಿತರಿಸುವ ‘ಮೈತ್ರಿ ಕಪ್’ ಯೋಜನೆಯು ಪ್ರಾಯೋಗಿಕವಾಗಿ ರಾಜ್ಯದ ಎರಡು ಜಿಲ್ಲೆಗಳಲ್ಲಿ ಜಾರಿಗೆ ಬಂದಿರುವುದು ಸ್ವಾಗತಾರ್ಹ. ಸರ್ಕಾರವು ಈ ಯೋಜನೆಯನ್ನು ರಾಜ್ಯದ ಎಲ್ಲೆಡೆಗೂ ವಿಸ್ತರಿಸಲಿ. ಇದರೊಂದಿಗೆ ಮುಂದಿನ ದಿನಗಳಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ಎರಡು ದಿನಗಳ ರಜೆ ಸೌಲಭ್ಯ ಕಲ್ಪಿಸಲು ಕ್ರಮ ಜರುಗಿಸಲಿ. ಮುಟ್ಟಿನ ಸಮಯದಲ್ಲಿ ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಿರಿಕಿರಿ ಅನುಭವಿಸುತ್ತಾರೆ ಎಂಬುದು ವೈಜ್ಞಾನಿಕವಾಗಿ ದೃಢಪಟ್ಟಿದೆ. ಹೀಗಾಗಿ, ಆ ಸಮಯದಲ್ಲಿ ರಜೆ ನೀಡುವುದರಿಂದ, ನಂತರದ ದಿನಗಳಲ್ಲಿ ಮಹಿಳೆಯರು ಆರೋಗ್ಯಪೂರ್ಣವಾಗಿ ಹಾಗೂ ಹೆಚ್ಚು ಉತ್ಸಾಹದಿಂದ ಕೆಲಸ ನಿರ್ವಹಿಸಲು ಪೂರಕವಾದ
ವಾತಾವರಣವನ್ನು ಕಲ್ಪಿಸಿದಂತೆ ಆಗುತ್ತದೆ.

ನವೀನ್ ಕುಮಾರ್,ಹೊನ್ನೇನಹಳ್ಳಿ, ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT