ADVERTISEMENT

ಮಾನಸಿಕ ಆರೋಗ್ಯ ಶಿಬಿರ ಪುನರಾರಂಭಿಸಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 20:30 IST
Last Updated 24 ಏಪ್ರಿಲ್ 2019, 20:30 IST

ಮಾನಸಿಕ ಆರೋಗ್ಯ ಕಾರ್ಯಕ್ರಮದ ಭಾಗವಾಗಿ ದಾವಣೆಗೆರೆ ಜಿಲ್ಲೆಯ ವಿವಿಧೆಡೆ ಮಾನಸಿಕ ಆರೋಗ್ಯ ಚಿಕಿತ್ಸಾ ಶಿಬಿರಗಳನ್ನು ನಡೆಸಲಾಗುತ್ತದೆ. ಅದರಂತೆ, ಹರಪನಹಳ್ಳಿ ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಮಾನಸಿಕ ಅಸ್ವಸ್ಥರು ಪ್ರತಿ ತಿಂಗಳು ನಿಗದಿತ ಸಮಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದು ಅವರ ಚೇತರಿಕೆಗೆ ನೆರವಾಗಿತ್ತು. ಆದರೆ ಹರಪನಹಳ್ಳಿ ತಾಲ್ಲೂಕು ಈಚೆಗೆ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಿರುವುದರಿಂದ, ತಾಲ್ಲೂಕಿನಲ್ಲಿ ಈ ಶಿಬಿರಗಳನ್ನು ಸ್ಥಗಿತಗೊಳಿಸಲಾಗಿದೆ. ‌

ಇದರಿಂದ ಮಾನಸಿಕ ಅಸ್ವಸ್ಥರ ಕುಟುಂಬಗಳಿಗೆ ತೊಂದರೆಯಾಗುತ್ತಿದೆ. ರೋಗಿಗಳನ್ನು ಬೇರೆಡೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲು ಪೋಷಕರು ಆರ್ಥಿಕವಾಗಿ ನಿಶ್ಶಕ್ತರಾಗಿದ್ದು, ಕಾಯಿಲೆಯ ಲಕ್ಷಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಬಳ್ಳಾರಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ವೈದ್ಯಾಧಿಕಾರಿಗಳು ಶೀಘ್ರವೇ ಮಾನಸಿಕ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ರೋಗಿಗಳು ಹಾಗೂ ಅವರ ಕುಟುಂಬಗಳ ನೆರವಿಗೆ ಮುಂದಾಗಬೇಕು.

- ಶ್ವೇತಾ ಬಿ.,ಎಲೆ ಬೇತೂರು, ದಾವಣಗೆರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.