ADVERTISEMENT

ಅಂಧ ಕಾರ್ಯಕ್ಷಮತೆಗೆ ಕನ್ನಡಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 19:30 IST
Last Updated 21 ಜನವರಿ 2021, 19:30 IST

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಸರ್ಕಾರವು ₹ 25,616 ಕೋಟಿ ಅನುದಾನ ಹಂಚಿಕೆ ಮಾಡಿ, ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದರೂ ಕೆಲವು ಸಂಕುಚಿತ ಮನಸ್ಸುಗಳು ಮಾತ್ರ ಕೊರೊನಾ ಹಾಗೂ ಇನ್ನಿತರ ಕಾರಣಗಳನ್ನು ನೀಡಿ, ನಿಗದಿಪಡಿಸಿರುವ ಹಣದಲ್ಲಿ ಅರ್ಧಕ್ಕಿಂತ ಹೆಚ್ಚು ಹಣವನ್ನು ಹಾಗೇ ಖಾತೆಯಲ್ಲಿ ಉಳಿಸಿವೆ ಎಂದು ವರದಿಯಾಗಿದೆ. ಇದು, ಅಧಿಕಾರಿಗಳ ಕಾರ್ಯಕ್ಷಮತೆಗೆ ಹಿಡಿದ ಕನ್ನಡಿಯಾಗಿದೆ.

ಶತಮಾನಗಳಿಂದ ಅನುಭವಿಸಿಕೊಂಡು ಬಂದಿರುವ ಸಾಮಾಜಿಕ ಶೋಷಣೆಯ ಜೊತೆಗೆ ಈಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೂ ಸಮುದಾಯ ಗುರಿಯಾಗುತ್ತಿರುವುದು ವಿಷಾದವೇ ಸರಿ. ಇಲಾಖೆಯ ಸಚಿವರು ಪರಿಣಾಮಕಾರಿಯಾಗಿ ಕೆಲಸ ಮಾಡಿ, ನಿಗದಿಪಡಿಸಿದ ಹಣದಲ್ಲಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಸಿಗುವಂತೆ ಕ್ರಮ ಕೈಗೊಳ್ಳಬೇಕು.

ಎಂ.ಮಂಚಶೆಟ್ಟಿ ಕಡಿಲುವಾಗಿಲು,ಮದ್ದೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.