ADVERTISEMENT

ವಾಚಕರ ವಾಣಿ | ಎಣ್ಣೆಕಾಳು: ಬೆಂಬಲ ಬೆಲೆ ನಿಗದಿಯಾಗಲಿ

​ಪ್ರಜಾವಾಣಿ ವಾರ್ತೆ
Published 17 ಮೇ 2022, 19:45 IST
Last Updated 17 ಮೇ 2022, 19:45 IST

ಹಿಂದಿನ ಕಾಲದಲ್ಲಿ ರೈತರೆಲ್ಲರೂ ಶೇಂಗಾ, ಕುಸುಬೆಯಂತಹ ಎಣ್ಣೆಕಾಳು ಬೆಳೆಗಳನ್ನು ಬೆಳೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಸಗೊಬ್ಬರ, ಬಿತ್ತನೆ ಬೀಜ, ಕೂಲಿ ದರ ಹೆಚ್ಚಳವಾಗಿದೆ. ಕೂಲಿಕಾರ್ಮಿಕರ ಸಮಸ್ಯೆ ಇದೆ. ಎಣ್ಣೆಕಾಳು ಬೆಳೆಗಳ ಇಳುವರಿ ಕಡಿಮೆ ಮತ್ತು ನಿರ್ವಹಣಾ ವೆಚ್ಚ ಹೆಚ್ಚು. ಇದಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ಎಣ್ಣೆಕಾಳು ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದು ಅದರ ಉತ್ಪಾದನೆಗೆ ಹೊಡೆತ ಬಿದ್ದಂತಾಗಿದೆ. ರೈತರು ಕೂಡ ಬೇರೆ ವಾಣಿಜ್ಯ ಬೆಳೆಗಳಿಗೆ ಮೊರೆ ಹೋದರು.

ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡಿ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಿದರೆ ಮಾತ್ರ ದೇಶದಲ್ಲಿ ಎಣ್ಣೆಕಾಳುಗಳ ಉತ್ಪಾದನೆ ಹೆಚ್ಚಿಸಬಹುದು ಮತ್ತು ಅಡುಗೆಎಣ್ಣೆ ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲು ಸಾಧ್ಯ.

–ಸಿದ್ಧನೂರು ದಿಲೀಪ್, ದಾವಣಗೆರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.