ADVERTISEMENT

ವಾಚಕರ ವಾಣಿ: ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ನಡೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 19:30 IST
Last Updated 12 ನವೆಂಬರ್ 2020, 19:30 IST

ಆನ್‌ಲೈನ್‌ ಸುದ್ದಿ ಪೋರ್ಟಲ್‌ಗಳ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಹೇರಲು ಹೊರಟಿರುವುದನ್ನು ತಿಳಿದು (ಪ್ರ.ವಾ., ನ. 12) ಅಚ್ಚರಿಯಾಯಿತು. ಇದರಿಂದ ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲವೇ? ಪಾಕಿಸ್ತಾನ ಸರ್ಕಾರವೂ ಈ ರೀತಿಯ ಸ್ಥಿತಿಯನ್ನು ಉಂಟುಮಾಡಿದ್ದ ಉದಾಹರಣೆ ಇದೆ. ಇದು ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ವಿಚಾರವೇ ಸರಿ. ಅಮೆಜಾನ್ ಪ್ರೈಮ್ ಹಾಗೂ ನೆಟ್‌ಫ್ಲಿಕ್ಸ್‌ನಂತಹ ಸಂಸ್ಥೆಗಳು ಕೋವಿಡ್‌ ಸಾಂಕ್ರಾಮಿಕದ ಈಗಿನ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ತೆರೆಕಾಣದಿರುವ ಚಲನಚಿತ್ರಗಳನ್ನು ಹಣ ಕೊಟ್ಟು ಪಡೆದು ಸಾರ್ವಜನಿಕರಿಗೆ ಮನರಂಜನೆ ಒದಗಿಸುತ್ತಿವೆ. ಅದಕ್ಕೂ ಸರ್ಕಾರ ಅಂಕುಶ ಹಾಕುವುದು ಸರಿಯಲ್ಲ. ಉಳಿದಂತೆ, ಟ್ವಿಟರ್, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಮೇಲೆ ನಿಯಂತ್ರಣ ಹೇರುವುದು ಸ್ವಾಗತಾರ್ಹ.

–ಬಾಲಕೃಷ್ಣ ಎಂ.ಆರ್., ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT