ADVERTISEMENT

2ಕ್ಕಿಂತ ಹೆಚ್ಚು ಮಕ್ಕಳಿದ್ದವರು ಚುನಾವಣೆಗೆ ಸ್ಪರ್ಧೆ ಇಲ್ಲ: ಎಲ್ಲರಿಗೂ ಅನ್ವಯಿಸಲಿ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2018, 20:24 IST
Last Updated 26 ಅಕ್ಟೋಬರ್ 2018, 20:24 IST

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಇದು ಸ್ವಾಗತಾರ್ಹ ಬೆಳವಣಿಗೆ. ಜನಸಂಖ್ಯೆ ನಿಯಂತ್ರಣಕ್ಕೆ ಇದು ಸಹಕಾರಿಯಾಗಲಿದೆ.

ಅದರಂತೆ, ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗೆ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದರೆ ಇನ್ನೂ ಒಳ್ಳೆಯದಾಗುತ್ತಿತ್ತು. ವಿದ್ಯಾವಂತರೇ ಹೆಚ್ಚಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಅಧಿಕಾರ ಹಿಡಿದರೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ಕಾಣಲು ಸಾಧ್ಯ. ಗ್ರಾಮ ಪಂಚಾಯಿತಿ ಮಾತ್ರವಲ್ಲ ಎಲ್ಲ ಚುನಾವಣೆಗಳಿಗೂ ಇದು ಅನ್ವಯವಾಗಲಿ.

–ಅಮಿತಕುಮಾರ ಬಿರಾದಾರ, ವಿಜಯಪುರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.