ADVERTISEMENT

ವಾಚಕರ ವಾಣಿ: ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 23:00 IST
Last Updated 8 ಆಗಸ್ಟ್ 2022, 23:00 IST

ಜಾತಿ, ಸಮುದಾಯ ಕೇಂದ್ರಿತ ನಿಗಮಗಳಲ್ಲಿ ಭ್ರಷ್ಟಾಚಾರ ಇರುವುದನ್ನು, ‘ಬಡವರ ಹಣ: ಬಲಾಢ್ಯರ ಕಲ್ಯಾಣ’ ಎಂಬ ವಿಶೇಷ ವರದಿಗೆ (ಪ್ರ.ವಾ., ಆ. 8) ಸಂಬಂಧಿಸಿದ ಪ್ರತಿಕ್ರಿಯೆಯಲ್ಲಿ ಸಮಾಜ ಕಲ್ಯಾಣ ಸಚಿವರೇ ಒಪ್ಪಿಕೊಂಡಿದ್ದಾರೆ. ಫಲಾನುಭವಿಗಳನ್ನು ಅರ್ಹತೆ ಮತ್ತು ಆದ್ಯತೆ ಮೇಲೆ ಆಯ್ಕೆ ಮಾಡುವುದು ಬಿಟ್ಟು ಶಾಸಕರನ್ನು ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡುವುದರಿಂದ ಪಕ್ಷದ ಹಿಂಬಾಲಕರು ಹಾಗೂ ಮಧ್ಯವರ್ತಿಗಳಿಗೆ ಅಧಿಕಾರ ಕೊಟ್ಟಂತಾಗಿದೆ. ಇದರಿಂದ ಯೋಜನೆಯ ಉಪಯೋಗ ನಿಜವಾದ ಫಲಾನುಭವಿಗಳನ್ನು ತಲುಪುತ್ತಿಲ್ಲ. ಆದ್ದರಿಂದ ನಿಜವಾದ ಫಲಾನುಭವಿಗಳನ್ನು ಪಾರದರ್ಶಕವಾಗಿ ಗುರುತಿಸಿ, ಯೋಜನೆಗಳು ಎಲ್ಲರಿಗೂ ಸಮಾನವಾಗಿ ತಲುಪುವಂತೆ ಮಾಡುವುದು ಅವಶ್ಯಕ.

-ಜಗದೀಶ್,ಬೆತ್ತನಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT