ADVERTISEMENT

ವಾಚಕರ ವಾಣಿ: ಕ್ರೀಡಾಳುಗಳಿಗೆ ಸಿಗಲಿ ಹೆಚ್ಚಿನ ಪ್ರೋತ್ಸಾಹ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 21:00 IST
Last Updated 9 ಆಗಸ್ಟ್ 2022, 21:00 IST

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತವು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. ಆದರೆ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುವ ಗುರುರಾಜ ಪೂಜಾರಿ ಅವರು, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತುಂಬಾ ಕಡಿಮೆ ಇದೆ ಎಂದು ಬೇಸರ ವ್ಯಕ್ತಪಡಿಸಿರುವುದು ಗಮನಾರ್ಹ.

ಭಾರತೀಯ ಕ್ರೀಡಾಪಟುಗಳು ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿ, ದೇಶದ ಕೀರ್ತಿಪತಾಕೆ ಉತ್ತುಂಗದಲ್ಲಿ ಹಾರಾಡುವಂತೆ ಮಾಡಬೇಕೆಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೀಡಾಪಟುಗಳಿಗೆ ಹೆಚ್ಚು ಉತ್ತೇಜನ ನೀಡಬೇಕು. ಉದ್ಯೋಗ ಕಲ್ಪಿಸಬೇಕು. ಪ್ರೋತ್ಸಾಹಧನ ನೀಡಬೇಕು. ಅನುಕೂಲಕರ ವಾತಾವರಣವನ್ನು ನಿರ್ಮಿಸಿಕೊಡಬೇಕು.

ವಿ.ತಿಪ್ಪೇಸ್ವಾಮಿ,ಹಿರಿಯೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.